HomeInternationalವಿಶ್ವಸಂಸ್ಥೆಯಲ್ಲಿ ಇಂದು 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮೋದಿ ಭಾಗಿ

ವಿಶ್ವಸಂಸ್ಥೆಯಲ್ಲಿ ಇಂದು 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮೋದಿ ಭಾಗಿ

ನ್ಯೂಯಾರ್ಕ್: 4 ದಿನಗಳ ಭೇಟಿಗಾಗಿ ಅಮೆರಿಕ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ನ್ಯೂಯಾರ್ಕ್ ಗೆ ಆಗಮಿಸಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ.

ಅಮೆರಿಕದ ಅಧಿಕೃತ ಆಹ್ವಾನಿತರಾಗಿ ಪ್ರಧಾನಿಯವರ ಮೊದಲ ಭೇಟಿ ಇದಾಗಿದ್ದು, ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದೆ. ವಿಶ್ವಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ, ಶ್ವೇತ ಭವನದಲ್ಲಿ ಅಮೆರಿಕ ಅಧ್ಯಕ್ಷರ ಔತಣಕೂಟ, ಅಮೆರಿಕ ಸರ್ಕಾರದ ಪರವಾಗಿ ಅಧಿಕೃತ ಔತಣಕೂಟ, ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಆಯೋಜಿಸಿರುವ ಔತಣಕೂಟ, ಅಮೆರಿಕ ಸಂಸತ್ತಿನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ, ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಭಾಷಣ, ಉದ್ಯಮಿಗಳೊಂದಿಗೆ ಸಂವಾದ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ವಿಶ್ವಸಂಸ್ಥೆಯಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ನ್ಯೂಯಾರ್ಕ್ ನಲ್ಲಿ ವಿವಿಧ ಉದ್ಯಮಿಗಳು, ಕಂಪನಿಗಳ ಸಿಇಓ ಗಳನ್ನು ಭೇಟಿಯಾಗಲಿದ್ದಾರೆ. ನಂತರ ವಾಷಿಂಗ್ಟನ್ ಗೆ ಪ್ರಯಾಣ ಬೆಳೆಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular