ನವದೆಹಲಿ: ರಾಜ್ಯದ 14 ಲೋಕಸಭೆ ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಲೋಕಸಭೆ ಚುನಾವಣೆಗೆ ಮತದಾನ ನಡೆಯುತ್ತಿದೆ. ರಾಜ್ಯದ 14 ಕ್ಷೇತ್ರಗಳು ಸೇರಿ ದೇಶದ 88 ಕ್ಷೇತ್ರಗಳಲ್ಲಿ(ಎರಡನೇ ಹಂತದಲ್ಲಿ) ಇಂದು ಮತದಾನ ಆರಂಭವಾಗಿದೆ.
ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಮತದಾರರಿಗೆ ಕರೆ ನೀಡಿದ್ದಾರೆ
ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ಕೋರುತ್ತೇನೆ. ನಿಮ್ಮ ಮತ ನಿಮ್ಮ ಧ್ವನಿ! ಎಂದು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ…
— Narendra Modi (@narendramodi) April 26, 2024