ತಾಯಿ ನಿಧನದಿಂದ ದುಃಖದಲ್ಲಿರುವ ನಟ ಕಿಚ್ಚ ಸುದೀಪ್ ಗೆ ಧೈರ್ಯ ಹೇಳಿದ ಮೋದಿ

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಸುದೀಪ್ ಅವರಿಗೆ ಪತ್ರ ಬರೆದಿದ್ದಾರೆ.

ಅ. 20ರಂದು ಸರೋಜಾ ಸಂಜೀವ್ ನಿಧನರಾಗಿದ್ದಾರೆ. ತಾಯಿ ಕಳೆದುಕೊಂಡ ನೋವಿನಲ್ಲಿರುವ ಸುದೀಪ್ ಅವರಿಗೆ ಪ್ರಧಾನಿ ಮೋದಿ ಪತ್ರ ಬರೆದು ಸಾಂತ್ವನ ಹೇಳಿದ್ದಾರೆ. ನಿಮ್ಮ ತಾಯಿ ಸರೋಜಾ ಸಂಜೀವ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ನಷ್ಟವನ್ನು ಭರಿಸಲು ಸಾಧ್ಯವಿಲ್ಲ. ಅವರ ಜೊತೆಗೆ ನಿಮಗೆ ಇದ್ದ ಬಾಂಧವ್ಯ, ಅವರ ಪರಿಣಾಮ ನಿಮ್ಮ ಮೇಲೆ ಎಷ್ಟಿತ್ತು ಎಂಬುದನ್ನು ನಿಮ್ಮ ದುಃಖವೇ ಹೇಳುತ್ತಿದೆ. ನೆನಪುಗಳ ಮೂಲಕ ಅವರು ಶಾಶ್ವತವಾಗಿ ಇರಲಿದ್ದಾರೆ ಎಂದು ಪತ್ರ ಬರೆದು ಮೋದಿ ಸುದೀಪ್ ಗೆ ಧೈರ್ಯ ಹೇಳಿದ್ದಾರೆ.

ಈ ಕಷ್ಟದ ಸಂದರ್ಭದಲ್ಲಿ ಸಂತಾಪ ಸೂಚಿಸುತ್ತೇನೆ. ನೋವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.

ಇದಕ್ಕೆ ಪ್ರಧಾನಿಯವರಿಗೆ ಸುದೀಪ್ ಧನ್ಯವಾದ ಹೇಳಿದ್ದಾರೆ. ನಿಮ್ಮ ಚಿಂತನಶೀಲ ಮಾತುಗಳು ಕಷ್ಟದ ಸಮಯದಲ್ಲಿ ಹೃದಯ ತಟ್ಟಿದೆ. ನಿಮ್ಮ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ ಎಂದು ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read