ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ದೆಹಲಿಯ ಕೆಂಪು ಕೋಟೆಯ ಮೇಲೆ ಇಂದು ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಸ್ವಾತಂತ್ರ್ಯ ಹೋರಾಟದ ನೆನಪು, ದೇಶದ ಮುಂದಿನ ಗುರಿಯ ಬಗ್ಗೆ ಮೋದಿ ಮಾತನಾಡಲಿದ್ದಾರೆ. ಇದಕ್ಕೂ ಮುನ್ನ ಅವರು ರಾಜ್ ಘಾಟ್ ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ದೇಶದ ಜನತೆಗೆ ಶುಭಾಶಯ ಹೇಳಿದ್ದಾರೆ. ”ನನ್ನ ಸಹ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು” ಎಂದು ಅವರು ಟ್ವೀಟ್ ಮಾಡಿ ಶುಭ ಕೋರಿದ್ದಾರೆ.
https://twitter.com/narendramodi/status/1823887570046214397