HomeKarnatakaಪ್ರಧಾನಿ ನರೇಂದ್ರ ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟಿದ್ದ ಯುವಕ ಅರೆಸ್ಟ್

ಪ್ರಧಾನಿ ನರೇಂದ್ರ ಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟಿದ್ದ ಯುವಕ ಅರೆಸ್ಟ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ಅವಾಚ್ಯ ಪದಗಳಿಂದ ನಿಂದಿಸಿ ವಿಡಿಯೋ ಹರಿಬಿಟ್ಟಿದ್ದ ಯುವಕನನ್ನು ಬೆಂಗಳೂರಿನ ಬಾಣಾಸವಾಡಿ ಪೊಲೀಸರು ಬಂಧಿಸಿದ್ದಾರೆ.

ಹಡ್ಸನ್ ಬಂಧಿತ ಆರೋಪಿ. ಈತನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಡ್ಸನ್ ಅವಾಚ್ಯ ಶಬ್ದ ಬಳಸಿ ಪ್ರಧಾನಿ ಮೋದಿಯವರನ್ನು ನಿಂದಿಸಿ ವಿಡಿಯೋ ಮಾಡಿದ್ದ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗಿತ್ತು.

ಇದನ್ನು ಗಮನಿಸಿದ ಸರ್ವಜ್ಞನಗರ ಬಿಜೆಪಿ ನಾಯಕರು, ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular