HomeIndiaBIG BREAKING NEWS: ಭಾರೀ ಬಹುಮತದೊಂದಿಗೆ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್ ಅಂಗೀಕಾರ

BIG BREAKING NEWS: ಭಾರೀ ಬಹುಮತದೊಂದಿಗೆ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್ ಅಂಗೀಕಾರ

ನವದೆಹಲಿ: ಐತಿಹಾಸಿಕ ನಾರಿ ಶಕ್ತಿ ವಂದನಾ ಮಹಿಳಾ ಮೀಸಲಾತಿ ವಿಧೇಯಕ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ನೂತನ ಸಂಸತ್ ಭವನದಲ್ಲಿ ಇಂದು ಬೆಳಗ್ಗೆಯಿಂದ ಮಹಿಳಾ ಮೀಸಲಾತಿ ವಿಧೇಕಕ್ಕೆ ಸಂಬಂಧಿಸಿದಂತೆ 8 ಗಂಟೆಗಳ ಕಾಲ ಚರ್ಚೆ ನಡೆದು, ಸ್ಪೀಕರ್ ಓಂ ಬಿರ್ಲಾ ಅವರು ಮತಕ್ಕೆ ಹಾಕಿದ್ದಾರೆ.

ಮಹಿಳಾ ಮೀಸಲಾತಿ ವಿಧೇಯಕ ಮೇಲೆ ಸದಸ್ಯರು ಮತದಾನ ಮಾಡಿದ್ದಾರೆ. ನೂತನ ಸಂಸತ್ ಭವನದಲ್ಲಿ ಕಲಾಪ ಆರಂಭವಾದ ಎರಡನೇ ದಿನವೇ ಮಹಿಳಾ ಮೀಸಲಾತಿ ವಿಧೇಯಕ ಮೇಲೆ ಮತದಾನ ನಡೆದಿದ್ದು, ಭಾರಿ ಬಹುಮತದೊಂದಿಗೆ ಅಂಗೀಕಾರಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧೇಯಕದ ವಿರುದ್ಧ ಇಬ್ಬರು ಸಂಸದರು, ಪರವಾಗಿ 454 ಸಂಸದರು ಮತದಾನ ಮಾಡಿದ್ದಾರೆ. ಇದರೊಂದಿಗೆ ಐತಿಹಾಸಿಕ ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಗೊಂಡಿದೆ. ಇದರೊಂದಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular