HomeKarnatakaBIG NEWS: ರಾಜ್ಯದ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಸಲ್ಲಿಸಿದ 18 ಬೇಡಿಕೆಗಳ ಪಟ್ಟಿಯಲ್ಲಿರುವ...

BIG NEWS: ರಾಜ್ಯದ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಸಲ್ಲಿಸಿದ 18 ಬೇಡಿಕೆಗಳ ಪಟ್ಟಿಯಲ್ಲಿರುವ ಅಂಶಗಳೇನು?

ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಅಭಿವೃದ್ಧಿ ಕುರಿತ 18 ಬೇಡಿಕೆಗಳ ಪಟ್ಟಿ ಸಲ್ಲಿಸಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದು. ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಿದರು. ಇದಕ್ಕೂ ಮುನ್ನ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು. ಈ ವೇಳೆ ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತಾದ 18 ಪ್ರಮುಖ ಅಂಶಗಳ ಬೇಡಿಕೆಗಳ ಬಗ್ಗೆ ಮನವಿ ಪತ್ರವನ್ನು ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ 18 ಬೇಡಿಕೆಗಳ ಪಟ್ಟಿಯಲ್ಲಿರುವುದೇನು? ಇಲ್ಲಿದೆ ಪ್ರಮುಖ ಅಂಶಗಳು

18 ಬೇಡಿಕೆಗಳು:

  • ಕೋಲಾರ ರೈಲ್ವೆ ಕೋಚ್ ಫ್ಯಾಕ್ಟರಿ: 1,123 ಎಕರೆ ಭೂಮಿ ನೀಡಿದ್ದರೂ ಅನುಷ್ಠಾನಗೊಳ್ಳದ ಈ ಯೋಜನೆಯ ಪುನರುಜ್ಜೀವನಕ್ಕೆ ಮನವಿ.
  • ಹೈ-ಸ್ಪೀಡ್ ರೈಲು ವಿಸ್ತರಣೆ: ಬೆಂಗಳೂರು-ಮೈಸೂರು ವಿಭಾಗವನ್ನು ಪ್ರಸ್ತಾವಿತ ಹೈ-ಸ್ಪೀಡ್ ರೈಲು ಕಾರಿಡಾರ್‌ನಲ್ಲಿ ಸೇರಿಸಲು ಕೋರಿಕೆ.
  • ಸಬರ್ಬನ್ ರೈಲು ಮತ್ತು ಮುಂಬೈ ಕಾರಿಡಾರ್: ಬೆಂಗಳೂರು ಉಪನಗರ ರೈಲು ಯೋಜನೆಗೆ ಹಣ ಬಿಡುಗಡೆ ಹಾಗೂ ಕಿತ್ತೂರು-ಕಲ್ಯಾಣ ಕರ್ನಾಟಕ ಸಂಪರ್ಕಿಸುವ ಬೆಂಗಳೂರು-ಮುಂಬೈ ಹೈ-ಸ್ಪೀಡ್ ರೈಲು ಕಾರಿಡಾರ್ ಆರಂಭಿಸಲು ವಿನಂತಿ.
  • ಜಲ ಜೀವನ್ ಮಿಷನ್ (JJM): ಕೇಂದ್ರದಿಂದ ಬರಬೇಕಾದ ₹17,554 ಕೋಟಿ ಬಾಕಿ ಹಣ ಬಿಡುಗಡೆಗೆ ಒತ್ತಾಯ.
  • 15ನೇ ಹಣಕಾಸು ಆಯೋಗದ ಅನುದಾನ: ಗ್ರಾಮ ಪಂಚಾಯತ್‌ಗಳಿಗೆ ಬರಬೇಕಾದ ₹2,860 ಕೋಟಿ ಅನುದಾನ ಬಿಡುಗಡೆಗೆ ಮನವಿ.
  • ರಾಷ್ಟ್ರೀಯ ಹೆದ್ದಾರಿ ಯೋಜನೆಗಳು: ಕಳೆದ 12 ವರ್ಷಗಳಿಂದ ಬಾಕಿ ಇರುವ ಹೊಸ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಮಂಜೂರಾತಿಗೆ ಕೋರಿಕೆ.
  • ಕಂದಾಯ ಕೊರತೆ ಅನುದಾನ: 15ನೇ ಹಣಕಾಸು ಆಯೋಗ ಶಿಫಾರಸು ಮಾಡಿರುವ ₹5,495 ಕೋಟಿ ಬಿಡುಗಡೆಗೆ ವಿನಂತಿ.
  • ಬೆಂಗಳೂರಿಗೆ ವಿಶೇಷ ಪ್ಯಾಕೇಜ್: ನಗರದ ಮೂಲಸೌಕರ್ಯ ಅಭಿವೃದ್ಧಿಗಾಗಿ ₹26,000 ಕೋಟಿ ವಿಶೇಷ ಅನುದಾನಕ್ಕೆ ಬೇಡಿಕೆ.
  • ಮೇಕೆದಾಟು ಯೋಜನೆ: ಕುಡಿಯುವ ನೀರಿನ ಉದ್ದೇಶದ ಈ ಯೋಜನೆಗೆ ಶೀಘ್ರವಾಗಿ ಕೇಂದ್ರದ ಅನುಮೋದನೆಗೆ ಒತ್ತಾಯ.
  • ಭದ್ರಾ ಮೇಲ್ದಂಡೆ ಯೋಜನೆ: ಈ ಯೋಜನೆಗೆ ‘ರಾಷ್ಟ್ರೀಯ ಮಾನ್ಯತೆ’ ನೀಡಿ, ಘೋಷಿತ ₹5,300 ಕೋಟಿ ಸಹಾಯಧನ ಬಿಡುಗಡೆಗೆ ಮನವಿ.
  • ಕೃಷ್ಣಾ ಮೇಲ್ದಂಡೆ ಯೋಜನೆ (UKP-III): ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪನ್ನು ಗೆಜೆಟ್‌ನಲ್ಲಿ ಪ್ರಕಟಿಸಲು ಮತ್ತು ಯೋಜನೆಗೆ ರಾಷ್ಟ್ರೀಯ ಮಾನ್ಯತೆ ನೀಡಲು ಮನವಿ.
  • ಮಹದಾಯಿ (ಕಳಸಾ ನಾಲಾ): ಕುಡಿಯುವ ನೀರಿನ ಯೋಜನೆಗೆ ವನ್ಯಜೀವಿ ವಿಭಾಗದಿಂದ ಶೀಘ್ರ ಅನುಮತಿ ಕೊಡಿಸಲು ವಿನಂತಿ.
  • ನದಿಗಳ ಜೋಡಣೆ: ಗೋದಾವರಿ-ಕಾವೇರಿ ಮತ್ತು ಬೆಡ್ತಿ-ವರದಾ ಯೋಜನೆಗಳಲ್ಲಿ ಕರ್ನಾಟಕಕ್ಕೆ 40-45 TMC ನೀರು ಹಂಚಿಕೆಗೆ ಒತ್ತಾಯ.
  • ಮೀಸಲಾತಿ ರಕ್ಷಣೆ: ರಾಜ್ಯದ 56% ಮೀಸಲಾತಿ ನೀತಿಯನ್ನು ಸಂವಿಧಾನದ 9ನೇ ವೇಳಾಪಟ್ಟಿಗೆ ಸೇರಿಸಲು ಮನವಿ.
  • ST ಪಟ್ಟಿಗೆ ಸೇರ್ಪಡೆ: ರಾಜ್ಯ ಶಿಫಾರಸು ಮಾಡಿರುವ ಕೆಲವು ಹಿಂದುಳಿದ ಜಾತಿಗಳನ್ನು ಕೇಂದ್ರದ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲು ಕೋರಿಕೆ.
  • ಕಲ್ಯಾಣ ಕರ್ನಾಟಕ ಅಭಿವೃದ್ಧಿ: ಆರ್ಟಿಕಲ್ 371(J) ಅಡಿಯಲ್ಲಿ ವಾರ್ಷಿಕ ₹5,000 ಕೋಟಿ ಅನುದಾನ ಮತ್ತು ಪ್ರತಿ ಜಿಲ್ಲೆಯಲ್ಲೂ ಸಾರ್ವಜನಿಕ ವಲಯದ ಉದ್ಯಮ (PSU) ಸ್ಥಾಪನೆಗೆ ಮನವಿ.
  • ಶರಾವತಿ ಪಂಪ್ಡ್ ಸ್ಟೋರೇಜ್: 2,000 ಮೆಗಾವ್ಯಾಟ್ ಸಾಮರ್ಥ್ಯದ ಯೋಜನೆಗೆ ಅರಣ್ಯ ಮತ್ತು ಪರಿಸರ ಇಲಾಖೆಯ ಶೀಘ್ರ ಅನುಮತಿಗೆ ಕೋರಿಕೆ.
  • ರಾಯಚೂರಿನಲ್ಲಿ ಏಮ್ಸ್ (AIIMS): ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಸುಧಾರಣೆಗಾಗಿ ರಾಯಚೂರಿನಲ್ಲಿ ಏಮ್ಸ್ ಆಸ್ಪತ್ರೆ ಸ್ಥಾಪಿಸಲು ಮಂಜೂರಾತಿಗೆ ಮನವಿ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular