HomeKarnatakaBREAKING: ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

BREAKING: ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆದಿಚುಂಚನಗಿರಿಯ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆಗಾಗಿ ರಾಜ್ಯಕ್ಕೆ ಆಗಮಿಸಿದ್ದಾರೆ. ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮೀಯವಾಗಿ ಬರಮಾಡಿಕೊಂಡರು.

ನವದೆಹಲಿಯಿಂದ ವಿಶೇಶ ವಿಮಾನದಲ್ಲಿ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿಯವರಿಗೆ 18 ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು.

ರಾಜ್ಯದ ಸಮಸ್ಯೆಗಳ ಕುರಿತಂತೆ ವಿವರಿಸಿರುವ 18 ಅಂಶಗಳ ಮನವಿ ಪತ್ರವನ್ನು ಪ್ರಧಾನಿ ಮೋದಿಯವರಿಗೆ ಸಲ್ಲಿಸಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರೊಂದಿಗೆ ಕೆಲ ಕಾಲ ಚರ್ಚೆ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳಿಕ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ತೆರಳಿದ ಪ್ರಧಾನಿ ಮೋದಿ ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ತಪೋವನ ಹೆಲಿಪ್ಯಾಡ್ ಗೆ ಆಗಮಿಸಿದರು. ಅಲ್ಲಿಂದ 15 ಕಿ.ಮೀ ಕಾರಿನಲ್ಲಿ ರಸ್ತೆ ಮಾರ್ಗವಾಗಿ ಆದಿಚುಂಚನಗಿರಿ ಮಠಕ್ಕೆ ಆಗಮಿಸಿದರು.

ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ, ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular