HomeKarnatakaBREAKING NEWS: ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ

BREAKING NEWS: ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಬೆಂಗಳೂರು: ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ರಾಜ್ಯದಲ್ಲಿ ಮತದಾನಕ್ಕೆ ಕೆಲ ದಿನಗಳು ಮಾತ್ರ ಬಾಕಿ ಇದೆ. ರಾಜಕೀಯ ಪಕ್ಷಗಳ ನಾಯಕರು ಮತದಾರನ್ನು ಓಲೈಸಲು ಕೊನೇ ಹಂತದ ಕಸರತ್ತು ನಡೆಸಿದ್ದು, ಅಬ್ಬರ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಮತ ಬೇಟೆಗಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ.

ದೆಹಲಿಯಿಂದ ವಿಷೇಷ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಹೆಲಿಕಾಪ್ಟರ್ ಮೂಲಕ ಚಿಕ್ಕಬಳ್ಳಾಪುರಕ್ಕೆ ತೆರಳಿದ್ದಾರೆ. ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಬಳಿಕ ಬೆಂಗಳೂರಿಗೆ ವಾಪಾಸ್ ಆಗಲಿದ್ದು, ಅರಮನೆ ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ, ಬಿಜೆಪಿ ಬ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular