ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಗೆ ಪತ್ರ ಬರೆದ ಪ್ರಧಾನಿ ಮೋದಿ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದಿದ್ದಾರೆ.

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಯದುವೀರ್ ಒಡೆಯರ್ ಪರ ಚುನಾವಣಾ ಪ್ರಚಾರ ನಡೆಸಿದ್ದರು. ಇದೀಗ ಯದುವೀರ್ ಒಡೆಯರ್ ಗೆ ಪತ್ರ ಬರೆದಿದ್ದು, ಚುನಾವಣಾ ವಿಚಾರಗಳ ಬಗ್ಗೆ ಮಾಹಿತಿಯನ್ನೊಳಗೊಂಡಿರುವ ಹಾಗೂ ಮುಂದೆ ಯಾವ ರೀತಿ ಕೆಲಸ ಮಾಡಬೇಕು ಎಂಬ ಬಗ್ಗೆ ಸಂದೇಶ ನೀಡಿದ್ದಾರೆ.

ನನ್ನ ಸಹೋದ್ಯೋಗಿ ಯದುವೀರ್ ಜಿ ಎಂದು ಪತ್ರ ಆರಂಭಿಸಿರುವ ಪ್ರಧಾನಿ ಮೋದಿ, ಈ ಪತ್ರ ನಿಮಗೆ ಉತ್ತಮ ಆರೋಗ್ಯವನ್ನು ನೀಡುತ್ತದೆ ಎಂದು ಭಾವಿಸುತ್ತೇನೆ. ನೀವು ನೇರವಾಗಿ ಜನರ ಸೇವೆ ಮಾಡುವ ಮೂಲಕ ಮೈಸೂರಿನ ಒಡೆಯರ್ ಪರಂಪರೆಯನ್ನು ಮುನ್ನಡೆಸುತ್ತಿರುವುದು ಶಾಘನೀಯ. ಸುಸ್ಥಿರ ಅಭಿವೃದ್ಧಿ, ಶಿಕ್ಷಣಕ್ಕಾಗಿ ನಿಮ್ಮ ಸಮರ್ಪಣೆ ಸ್ಪಷ್ಟವಾಗಿದೆ. ಜನರ ಆಶಿರ್ವಾದದಿಂದ ನೀವು ಸಂಸತ್ತಿಗೆ ಬರುತ್ತೀರಿ ಎಂಬ ವಿಶ್ವಾಸವಿದೆ. ನಿಮ್ಮಂತಹ ತಂಡದ ಸದಸ್ಯರು ನಮಗೆ ದೊಡ್ಡ ಶಕ್ತಿ.

ಜನತೆಗೆ ಇದು ಮಾಮೂಲಿ ಚುನಾವಣೆಯಲ್ಲ ಎಂದು ಹೇಳಬಯಸುತ್ತೇನೆ. ಪ್ರತಿಯೊಬ್ಬರಿಗೂ ಉತ್ತಮ ಜೀವನವನ್ನು ಖಚಿತಪಡಿಸಿಕೊಳ್ಳಲು ಈ ಚುನವಣೆಯು ನಮ್ಮ ಧ್ಯೇಯದಲ್ಲಿ ನಿರ್ಣಾಯಕವಾಗಿರುತ್ತದೆ. ಬಿಜೆಪಿ ಪಡೆಯುವ ಪ್ರತಿ ಮತವು ಸ್ಥಿರ ಸರ್ಕಾರ ರಚಿಸುವತ್ತ ಸಾಗುತ್ತದೆ. 2047ರ ಅಭಿವೃದ್ಧಿ ಹೊಂದಿದ ರಾಷ್ಟ್ರದ ಪಯಣಕ್ಕೆ ವೇಗ ನೀಡುತ್ತದೆ ಚುನಾವಣೆ ನಮ್ಮ ದೇಶದ ಭವಿಷ್ಯಕ್ಕೆ ಅತ್ಯಂತ ಮಹತ್ವದ್ದಾಗಿದೆ. ಬಿಸಿಲ ತಾಪಕ್ಕೂ ಮುನ್ನವೇ ಮತದಾರರು ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.

ನನ್ನ ಸಹನಾಗರಿಕ ಕಲ್ಯಾಣಕ್ಕಾಗಿ ನನ್ನ ಪ್ರತಿ ಕ್ಷಣವನ್ನು ಮೀಸಲಿಡುತ್ತೇನೆ ಎಂಬ ಭರವಸೆಯನ್ನು ಪ್ರತಿಯೊಬ್ಬರಿಗೂ ತಿಳಿಸಲು ನಿಮ್ಮನ್ನು ಒತ್ತಾಯಿಸುವೆ. ಚುನಾವಣೆಯಲ್ಲಿ ನಿಮ್ಮ ಗೆಲುವಿಗಾಗಿ ನನ್ನ ಶುಭಾಷಯ ಕಳುಹಿಸಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read