BIG NEWS: ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಿದ್ದು, ಅರಮನೆ ನಗರಿ ಮೈಸೂರಿಗೆ ಆಗಮಿಸಿದ್ದಾರೆ.

ಭೋಪಾಲ್ ನಿಂದ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಜ್ಯ ಬಿಜೆಪಿ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು.

ಮಂಡಕಳ್ಳಿ ಏರ್ ಪೋರ್ಟ್ ನಿಂದ ಮೈಸೂರಿನ ಮಹಾರಾಜಾ ಕಾಲೇಜು ಮೈದಾನಕ್ಕೆ ತೆರಳಲಿದ್ದು, ಮಹಾರಾಜ ಕಲೇಜು ಮೈದಾನದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಬಳಿಕ ಮೈಸೂರಿನಿಂದ ಮಂಗಳೂರಿಗೆ ಪ್ರಧಾನಿ ಮೋದಿ ತೆರಳಲಿದ್ದು, ಕಡಲ ನಗರಿಯಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read