HomeIndiaBIG NEWS: ಜ. 22 ಅಯೋಧ್ಯ ರಾಮ ಮಂದಿರ ಉದ್ಘಾಟನೆ, ಪ್ರಾಣ ಪ್ರತಿಷ್ಠಾಪನೆ ಕಾರ್ಯ ಆರಂಭ

BIG NEWS: ಜ. 22 ಅಯೋಧ್ಯ ರಾಮ ಮಂದಿರ ಉದ್ಘಾಟನೆ, ಪ್ರಾಣ ಪ್ರತಿಷ್ಠಾಪನೆ ಕಾರ್ಯ ಆರಂಭ

ನವದೆಹಲಿ: ಜನವರಿ 22ರಂದು ಅಯೋಧ್ಯ ಶ್ರೀ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಅಂದು ಮಧ್ಯಾಹ್ನ 12:45ಕ್ಕೆ ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನೆರವೇರಲಿದೆ.

ಜನವರಿ 23ರಂದು ಮುಂಜಾನೆ 1 ಗಂಟೆವರೆಗೂ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದ್ದು, ಪ್ರಧಾನಿ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಸೇರಿ ಹಲವರು ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನವರಿ 16 ರಿಂದಲೇ ರಾಮಮಂದಿರದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ವಾರಣಾಸಿಯ ವೇದಜ್ಞ ಲಕ್ಷ್ಮಿಕಾಂತ್ ದೀಕ್ಷಿತ್ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನೆರವೇರಲಿವೆ. ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಬರುವ ಎಲ್ಲರಿಗೂ ಆಧಾರ್ ಕಡ್ಡಾಯಗೊಳಿಸಲಾಗಿದೆ.

ದೇಶದ ವಿವಿಧೆಡೆಯ 400 ಸಾಧು, ಸಂತರು, 2,500ಕ್ಕೂ ಹೆಚ್ಚು ಗಣ್ಯರಿಗೆ ಆಹ್ವಾನ ನೀಡಲಾಗಿದೆ.ಎಂದು ಕಾರ್ಯಕ್ರಮದ ಬಗ್ಗೆ ರಾಮ ಜನ್ಮಭೂಮಿ ಟ್ರಸ್ಟ್ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular