HomeIndiaBREAKING NEWS: ಲೋಕಸಭಾ ಚುನಾವಣೆ: ವಾರಾಣಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

BREAKING NEWS: ಲೋಕಸಭಾ ಚುನಾವಣೆ: ವಾರಾಣಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

ವಾರಾಣಸಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಾರಾಣಸಿ ಕ್ಷೇತ್ರದಿಂದ 3ನೇ ಬಾರಿ ಲೋಕಸಭಾ ಅಖಾಡಕ್ಕಿಳಿದಿರುವ ಪ್ರಧಾನಿ ನರೇಂದ್ರ ಮೋದಿ ಇಂದು ನಾಮಪತ್ರ ಸಲ್ಲಿಸಿದರು.

ವಾರಾಣಸಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ವಾರಾಣಸಿಯ ದಶಾಶ್ವಮೇಧ ಘಾಟ್ ನಲ್ಲಿ ಗಂಗಾ ಸ್ನಾನ ಮಾಡಿ, ಗಂಗಾಪೂಜೆ, ಗಂಗಾರತಿ ನೆರವೇರಿಸಿದರು. ಬಳಿಕ ಕಾಲ ಭೈರವೇಶ್ವರ ದೇವಾಲಯಕ್ಕೆ ಆಗಮಿಸಿ ಕಾಲ ಭೈರವನಿಗೆ ವಿಶೇಷ ಪೂಜೆ ನೆರವೇರಿಸಿದರು. ಅಂಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಪ್ರಧಾನಿ ಮೋದಿ ಬಿಜೆಪಿ ಅಭ್ಯರ್ಥಿಯಾಗಿ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಮೂರನೇ ಬಾರಿ ನಾಮಪತ್ರ ಸಲ್ಲಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular