HomeKarnatakaBIG NEWS: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

BIG NEWS: ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದು, ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೆಚ್ಎಎಲ್ ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಡಿಜಿ & ಐಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಡಿಸಿ ದಯಾನಂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸ್ವಾಗತಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಎಎಲ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ವೇಳೆ ತೇಜಸ್ ಜೆಟ್ ಗಳ ಘಟಕ ಹಾಗೂ ಉತ್ಪಾದನಾ ಘಟಕಗಳನ್ನು ಪರಿಶೀಲಿಸಲಿದ್ದಾರೆ.

ವಿಧಾನಸಭಾ ಚುನಾವಣೆ ಬಳಿಕ ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಹೆಚ್ಎಎಲ್ ಕಾರ್ಯಕ್ರಮದ ಬಳಿಕ ಪ್ರಧಾನಿ ನರೇಂದ್ರ ಮೋದಿ ತೆಲಂಗಾಣಕ್ಕೆ ತೆರಳಿದ್ದು, ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular