BIG NEWS: ಅವರು ಬರೀ ನೋಬಾಲ್ ಎಸೆಯುತ್ತಿದ್ದಾರೆ; ನಮ್ಮ ಸದಸ್ಯರು ಸೆಂಚುರಿ ಬಾರಿಸುತ್ತಿದ್ದಾರೆ; ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಟೀಕೆ

ನವದೆಹಲಿ: ಮಣಿಪುರ ಹಿಂಸಾಚಾರ ಪ್ರಕರಣ ಸಂಬಂಧ ವಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಭಾಷಣ ಮಾಡಿದ್ದು, ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರದ ಮೇಲೆ ದೇಶದ ಜನತೆಗೆ ವಿಶ್ವಾಸವಿದೆ. ಇದು ಕೇಂದ್ರ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯವಲ್ಲ, ಅವಿಶ್ವಾಸ ನಿರ್ಣಯ ಮಂಡಿಸಿದ್ದಕ್ಕೆ ವಿಪಕ್ಷಗಳಿಗೆ ಧನ್ಯವಾದಗಳು. ಎನ್ ಡಿಎ ಬಲ ಇಂಡಿಯಾದ ಬಲ. 2024ರಲ್ಲಿ ಎನ್ ಡಿಎ, ಬಿಜೆಪಿ ಎಲ್ಲಾ ದಾಖಲೆಗಳನ್ನು ಮುರಿಯಲಿವೆ ಎಂದರು.

ವಿಪಕ್ಷ ನಾಯಕರೇ ಫೀಲ್ಡಿಂಗ್ ಆರ್ಗನೈಸ್ ಮಾಡಿದ್ದರು. ಆದರೆ ಸಿಕ್ಸ್, ಫೋರ್ ಗಳು ನಮ್ಮ ಕಡೆಯಿಂದ ಹೋದವು. ವಿಪಕ್ಷ ನಾಯಕರು ಬರೀ ನೋ ಬಾಲ್ ಎಸೆಯುತ್ತಿದ್ದಾರೆ. ನಮ್ಮ ಸದಸ್ಯರು ಸೆಂಚುರಿ ಬಾರಿಸುತ್ತಿದ್ದಾರೆ ಎಂದು ಟೀಕಿಸಿದರು.

ಎಲ್ಲರೂ ಶ್ರಮ ಪಡಬೇಕು. 2018ರಲ್ಲೂ ಇದೇ ಮಾತನ್ನು ಹೇಳಿದ್ದೆ. 5 ವರ್ಷ ಸಮಯ ಕೊಟ್ಟಿದ್ದೆ. ಆದರೂ ಸರಿ ಹೋಗಿಲ್ಲ. 2024ರ ಲೋಕಸಭೆ ಚುನಾವಣೆಯಲ್ಲಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read