HomeLatest NewsBREAKING: ಉಗ್ರರ ದಾಳಿ ಹಿನ್ನಲೆ ಏ. 27ರವರೆಗೆ ನೌಕರರಿಗೆ ‘ವರ್ಕ್ ಫ್ರಂ ಹೋಮ್’ ಗೆ ಸೂಚನೆ

BREAKING: ಉಗ್ರರ ದಾಳಿ ಹಿನ್ನಲೆ ಏ. 27ರವರೆಗೆ ನೌಕರರಿಗೆ ‘ವರ್ಕ್ ಫ್ರಂ ಹೋಮ್’ ಗೆ ಸೂಚನೆ

ಶ್ರೀನಗರ: ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ರೆಸಾರ್ಟ್‌ನಲ್ಲಿ ಭಯೋತ್ಪಾದಕರು 25 ಪ್ರವಾಸಿಗರು ಮತ್ತು ಸ್ಥಳೀಯ ಮಾರ್ಗದರ್ಶಿಯನ್ನು ಗುಂಡಿಕ್ಕಿ ಕೊಂದ ಒಂದು ದಿನದ ನಂತರ, ಕಾಶ್ಮೀರ ಕಣಿವೆಯ ಸರ್ಕಾರಿ ನೌಕರರಿಗೆ ವರ್ಕ್ ಫ್ರಂ ಹೋಮ್ ಗೆ ಸೂಚನೆ ನೀಡಲಾಗಿದೆ. ಏಪ್ರಿಲ್ 27ರವರೆಗೆ ಮನೆಯಿಂದಲೇ ಕೆಲಸ ನಿರ್ವಹಿಸಲು ಸರ್ಕಾರಿ ನೌಕರರಿಗೆ ತಿಳಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಅಧಿಕಾರಿಗಳು ಬುಧವಾರ ಪಿಎಂ ಪ್ಯಾಕೇಜ್ ನೌಕರರು ಮತ್ತು ಜಮ್ಮು ಮೂಲದ ಮೀಸಲು ವರ್ಗದ ನೌಕರರಿಗೆ ಒಂದು ವಾರ ಮನೆಯಿಂದಲೇ ಕೆಲಸ ಮಾಡಲು ಸೂಚಿಸಿದ್ದಾರೆ.

ಪಿಎಂ ಪ್ಯಾಕೇಜ್ ಅಡಿಯಲ್ಲಿ ಹೆಚ್ಚಿನ ಉದ್ಯೋಗಿಗಳು ವಲಸೆ ಬಂದ ಕಾಶ್ಮೀರಿ ಪಂಡಿತರು ಮತ್ತು ಜಮ್ಮು ಮೂಲದ ಮೀಸಲು ವರ್ಗದ ನೌಕರರು ಪರಿಶಿಷ್ಟ ಜಾತಿ(ಎಸ್‌ಸಿ) ಅಥವಾ ಪರಿಶಿಷ್ಟ ಪಂಗಡ(ಎಸ್‌ಟಿ) ಗಳಿಗೆ ಸೇರಿದವರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಂ ಪ್ಯಾಕೇಜ್ ಅಡಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಉದ್ಯೋಗಿಗಳು ಮತ್ತು ಜಮ್ಮು ಮೂಲದ ಎಲ್ಲಾ ಮೀಸಲು ವರ್ಗದ ನೌಕರರಿಗೆ ಈ ವಾರದ ಅವಧಿ(ಏಪ್ರಿಲ್ 27 ರವರೆಗೆ) ತಕ್ಷಣದಿಂದ ಜಾರಿಗೆ ಬರುವಂತೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular