HomeIndiaಬೆಂಗಳೂರು -ಧಾರವಾಡ ಸೇರಿ 5 ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಇಂದು ಮೋದಿ ಚಾಲನೆ

ಬೆಂಗಳೂರು -ಧಾರವಾಡ ಸೇರಿ 5 ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಇಂದು ಮೋದಿ ಚಾಲನೆ

ನವದೆಹಲಿ: ಬೆಂಗಳೂರು -ಧಾರವಾಡ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಸೇರಿದಂತೆ 5 ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಲಿದ್ದಾರೆ.

ಮಧ್ಯಪ್ರದೇಶದ ಭೋಪಾಲ್ ನ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ಬೆಳಗ್ಗೆ 10.30 ಕ್ಕೆ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳ ಸಂಚಾರಕ್ಕೆ ಚಾಲನೆ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧಾರವಾಡ -ಬೆಂಗಳೂರು ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಬೆಳಗ್ಗೆ ಧಾರವಾಡದಿಂದ ಹೊರಟು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ದಾವಣಗೆರೆಗೆ ಆಗಮಿಸಲಿದೆ. ದಾವಣಗೆರೆ ರೈಲು ನಿಲ್ದಾಣದಲ್ಲಿ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭೋಪಾಲ್ –ಇಂದೋರ್, ಭೋಪಾಲ್ –ಜಬಲ್ಪುರ, ರಾಂಚಿ –ಪಾಟ್ನಾ, ಮಡಗಾಂವ್ – ಮುಂಬೈ ಮಾರ್ಗದ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲುಗಳಿಗೆ ಇದೇ ವೇಳೆ ಪ್ರಧಾನಿ ಚಾಲನೆ ನೀಡಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular