HomeBusinessPMEGP ಯೋಜನೆ: ₹1,000 ಕೋಟಿ ಅಂಚು ಹಣ ಬಿಡುಗಡೆ – 1 ಲಕ್ಷಕ್ಕೂ ಅಧಿಕ ಹೊಸ...

PMEGP ಯೋಜನೆ: ₹1,000 ಕೋಟಿ ಅಂಚು ಹಣ ಬಿಡುಗಡೆ – 1 ಲಕ್ಷಕ್ಕೂ ಅಧಿಕ ಹೊಸ ಉದ್ಯೋಗ ಸೃಷ್ಟಿ ನಿರೀಕ್ಷೆ

ಬೆಂಗಳೂರು-ದೇಶದಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸುವ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣದ ಆಶಯಕ್ಕೆ ಮತ್ತಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆ (PMEGP) ಯಡಿ 1,000 ಕೋಟಿ ರೂಪಾಯಿಗಳ ಅಂಚು ಹಣ (Margin Money) ಸಹಾಯಧನವನ್ನು ಬಿಡುಗಡೆ ಮಾಡಿದೆ.

ನವದೆಹಲಿಯ ‘ಕರ್ತವ್ಯ ಭವನ-3’ರಲ್ಲಿ ಕೇಂದ್ರ ಕಿರು, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ಸಚಿವ ಜಿತನ್ ರಾಮ್ ಮಾಂಝಿ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಬಿಡುಗಡೆಯಾಗಿರುವ ₹1,000 ಕೋಟಿ ಸಹಾಯಧನದ ನೆರವಿನಿಂದ ದೇಶಾದ್ಯಂತ ಸುಮಾರು 11,333 ಹೊಸ ಕಿರು ಮತ್ತು ಸಣ್ಣ ಉದ್ಯಮ ಘಟಕಗಳು ಸ್ಥಾಪನೆಯಾಗುವ ನಿರೀಕ್ಷೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹೊಸ ಘಟಕಗಳ ಸ್ಥಾಪನೆಯಿಂದ ದೇಶದಲ್ಲಿ 1 ಲಕ್ಷಕ್ಕೂ ಅಧಿಕ ನೂತನ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.

ಗ್ರಾಮೀಣ ಆರ್ಥಿಕತೆಯ ಪ್ರೋತ್ಸಾಹ

ಸಣ್ಣ ಕೈಗಾರಿಕೆಗಳನ್ನು ಪ್ರೋತ್ಸಾಹಿಸುವ ಮೂಲಕ ಗ್ರಾಮೀಣ ಹಾಗೂ ಅರೆ-ನಗರ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಚುರುಕುಗೊಳಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.

ಸಮಾಜದ ಎಲ್ಲಾ ವರ್ಗದ ಜನರಿಗೆ ಸ್ವಯಂ ಉದ್ಯೋಗದ ಬಾಗಿಲು ತೆರೆಯಲಿದ್ದು, ಸುಸ್ಥಿರ ಜೀವನೋಪಾಯ ಕಂಡುಕೊಳ್ಳಲು ಈ ಆರ್ಥಿಕ ನೆರವು ನೆರವಾಗಲಿದೆ.

MSME ವಲಯದ ಬಲಕ್ಕಡಿಸುವಂತೆ

ಕಳೆದ ಕೆಲವು ವರ್ಷಗಳಿಂದ ದೇಶದಲ್ಲಿ MSME ವಲಯವನ್ನು ಬಲಪಡಿಸಲು ಕೇಂದ್ರ ಸರ್ಕಾರವು ಸಾಲು ಸಾಲು ಕ್ರಮಗಳನ್ನು ಕೈಗೊಳ್ಳುತ್ತಾ ಬಂದಿದೆ. ಕೊರೊನಾ ನಂತರದ ಅವಧಿಯಲ್ಲಿ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಮತ್ತು ಗ್ರಾಮೀಣ ಯುವಜನರು ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗುವುದನ್ನು ತಡೆಯಲು ‘ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆ’ (PMEGP) ಯನ್ನು ಪ್ರಮುಖ ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ.

ಕಳೆದ ಹಣಕಾಸು ವರ್ಷಗಳಲ್ಲಿಯೂ PMEGP ಅಡಿಯಲ್ಲಿ ಸಾವಿರಾರು ಯುವಕ-ಯುವತಿಯರಿಗೆ ಸಾಲ ಮತ್ತು ಸಹಾಯಧನ ನೀಡಿ ಉದ್ಯಮಿಗಳನ್ನಾಗಿ ಮಾಡಲಾಗಿತ್ತು. ಇಂದಿನ ಸ್ಪರ್ಧಾತ್ಮಕ ವಾತಾವರಣದಲ್ಲಿಯೂ ಸ್ವಂತ ಉದ್ಯಮ ಆರಂಭಿಸಲು ಆಸಕ್ತಿ ಹೊಂದಿರುವ ಯುವ ಸಮುದಾಯಕ್ಕೆ ಬಂಡವಾಳದ ಕೊರತೆ ಎದುರಾಗಬಾರದು ಎಂಬ ಉದ್ದೇಶದಿಂದ ಸರ್ಕಾರವು ನಿರಂತರವಾಗಿ ಈ ಸಹಾಯಧನವನ್ನು ಬಿಡುಗಡೆ ಮಾಡುತ್ತಾ ಬಂದಿದೆ.

“ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ‘ಆತ್ಮನಿರ್ಭರ ಭಾರತ’ (ಸ್ವಾವಲಂಬಿ ಭಾರತ) ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ದೇಶದ ಬೆನ್ನೆಲುಬಾಗಿರುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (MSME) ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂಧು ಕೇಂದ್ರ ಸಚಿವೆ ಶೋಭಾ ಕರದ್ಲಂಜೆ ಅವರು ತಿಳಿಸಿದ್ದಾರೆ.

ನವೋದ್ಯಮ ಹಾಗೂ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ

ಇತ್ತೀಚಿನ ದಿನಗಳಲ್ಲಿ ನವೋದ್ಯಮ (Startup) ಸಂಸ್ಕೃತಿ ಮತ್ತು ಸ್ವಯಂ ಉದ್ಯೋಗದ ಕಲ್ಪನೆ ದೇಶದೆಲ್ಲಡೆ ಪಸರಿಸುತ್ತಿದ್ದು, ಈ ₹1,000 ಕೋಟಿ ಬಿಡುಗಡೆಯು ಗ್ರಾಮೀಣ ಭಾಗದ ಉದಯೋನ್ಮುಖ ಉದ್ಯಮಿಗಳಿಗೆ ಹೊಸ ಭರವಸೆ ಮೂಡಿಸಿದೆ. ಅರ್ಜಿ ಸಲ್ಲಿಸಿ ಕಾಯುತ್ತಿದ್ದ ಸಾವಿರಾರು ಫಲಾನುಭವಿಗಳಿಗೆ ಬ್ಯಾಂಕುಗಳ ಮೂಲಕ ಅಂಚು ಹಣ ತಲುಪಲಿದ್ದು, ತಳಮಟ್ಟದಲ್ಲಿ ಉದ್ಯೋಗ ಸೃಷ್ಟಿ ಪ್ರಕ್ರಿಯೆಗೆ ವೇಗ ಸಿಗಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular