HomeAgricultureರೈತರಿಗೆ ಕೃಷಿ ಇಲಾಖೆಯಿಂದ ಗುಡ್ ನ್ಯೂಸ್: ಶೇ. 50ರ ಸಹಾಯಧನದಲ್ಲಿ ಪಿವಿಸಿ ಪೈಪ್ ವಿತರಣೆ

ರೈತರಿಗೆ ಕೃಷಿ ಇಲಾಖೆಯಿಂದ ಗುಡ್ ನ್ಯೂಸ್: ಶೇ. 50ರ ಸಹಾಯಧನದಲ್ಲಿ ಪಿವಿಸಿ ಪೈಪ್ ವಿತರಣೆ

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಬರಗಾಲದ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಲಭ್ಯವಿರುವ ನೀರಿನ ಸಂಪನ್ಮೂಲವನ್ನು ಮಿತವಾಗಿ ಮತ್ತು ಸಮರ್ಪಕವಾಗಿ ಬಳಸಿಕೊಳ್ಳಲು ಕೃಷಿ ಇಲಾಖೆ ಮುಂದಾಗಿದ್ದು, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ (ಇತರೆ ಉಪಚಾರ) ರೈತರಿಗೆ ಶೇಕಡಾ 50 ರಷ್ಟು ಸಹಾಯಧನದಲ್ಲಿ ಪಿವಿಸಿ ಪೈಪ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಕೃಷಿ ಬೆಳೆಗಳಿಗೆ ನೀರನ್ನು ಪರಿಣಾಮಕಾರಿಯಾಗಿ ಬಳಸಲು ಮತ್ತು ನೀರಿನ ಸಾಗಾಣಿಕೆ ವೇಳೆ ವ್ಯರ್ಥವಾಗುವುದನ್ನು ತಡೆಗಟ್ಟಲು ಈ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ. ಬರ ಪರಿಸ್ಥಿತಿಯ ನಡುವೆ ನೀರಿನ ಸಂರಕ್ಷಣೆಗೆ ರೈತರು ಸಹಕರಿಸಬೇಕೆಂದು ಇಲಾಖೆ ಮನವಿ ಮಾಡಿದೆ.

ಈ ಸೌಲಭ್ಯ ಪಡೆಯಲು ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿಯೊಂದಿಗೆ ರೈತ ಗುರುತಿನ ಸಂಖ್ಯೆ(ಎಫ್ಐಡಿ) ಸೇರಿದಂತೆ ಅಗತ್ಯ ದಾಖಲೆಗಳನ್ನು ಒದಗಿಸುವುದು ಕಡ್ಡಾಯವಾಗಿದೆ.

ಇಲಾಖೆ ನಿಗದಿಪಡಿಸಿದ ಅರ್ಹತಾ ಮಾನದಂಡಗಳು ಮತ್ತು ನಿಯಮಗಳ ಅನ್ವಯ ಅರ್ಹ ರೈತರಿಗೆ ಶೇ. 50ರ ಸಬ್ಸಿಡಿ ದರದಲ್ಲಿ ಪಿವಿಸಿ ಪೈಪ್‌ಗಳನ್ನು ವಿತರಿಸಲಾಗುತ್ತಿದ್ದು, ಜಿಲ್ಲೆಯ ರೈತರು ಈ ಯೋಜನೆಯ ಪ್ರಯೋಜನ ಪಡೆದು ಲಭ್ಯವಿರುವ ನೀರಿನ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಕೊಪ್ಪಳ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಕರಡು ವಿದ್ಯುಚ್ಛಕ್ತಿ ಸರಬರಾಜು ನಿಯಮಗಳು-2026: ಅಕ್ಟೋಬರ್ 22 ರಂದು ಸಾರ್ವಜನಿಕ ವಿಚಾರಣೆ

ಕೊಪ್ಪಳ: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆ.ಇ.ಆರ್.ಸಿ) ಕರಡು ಕೆ.ವಿ.ನಿ.ಆ. ವಿದ್ಯುಚ್ಛಕ್ತಿ ಸರಬರಾಜು ನಿಯಮಗಳು (ಇ.ಎಸ್.ಆರ್) 2026 ಅನ್ನು ಅಧಿಸೂಚಿಸಿದ್ದು, ಈ ಸಂಬಂಧ ಭಾಗಿದಾರರು ಹಾಗೂ ಸಾರ್ವಜನಿಕರಿಂದ ಸಲಹೆ, ಅನಿಸಿಕೆ ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸಿ ಸಾರ್ವಜನಿಕ ವಿಚಾರಣೆ ಆಯೋಜಿಸಿದೆ.

ಜೆಸ್ಕಾಂ ವ್ಯಾಪ್ತಿಯ ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ ಸಾರ್ವಜನಿಕ ವಿಚಾರಣೆಯನ್ನು ಇದೇ ಅಕ್ಟೋಬರ್ 22ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿಯ ಆರ್.ವೈ.ಎಂ.ಇ.ಸಿ ಕ್ಯಾಂಪಸ್‌ನಲ್ಲಿ (ಹೆಚ್.ಎಸ್.ಕೆ. ಪಾಲಿಟೆಕ್ನಿಕ್ ಸಭಾಂಗಣ, ಮೊದಲ ಮಹಡಿ, ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜು ಕ್ಯಾಂಪಸ್, ಕಂಟೋನ್ಮೆಂಟ್, ಬಳ್ಳಾರಿ) ನಡೆಯಲಿದೆ.

ಆಸಕ್ತ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಈ ಸಾರ್ವಜನಿಕ ವಿಚಾರಣೆಯಲ್ಲಿ ಪಾಲ್ಗೊಂಡು ಕರಡು ನಿಯಮಗಳಿಗೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ, ಸಲಹೆ ಅಥವಾ ಆಕ್ಷೇಪಣೆಗಳನ್ನು ನೇರವಾಗಿ ಆಯೋಗದ ಮುಂದೆ ಮಂಡಿಸಬಹುದಾಗಿದೆ ಎಂದು ಜೆಸ್ಕಾಂ ಕೊಪ್ಪಳ ವೃತ್ತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯ ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಕೊಪ್ಪಳ ಕ್ರೀಡಾ ವಸತಿ ನಿಲಯದ ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ: ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕೊಪ್ಪಳ: ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ನಡೆದ ಎಸ್.ಜಿ.ಎಫ್.ಐ 2026-27ನೇ ಸಾಲಿನ ರಾಜ್ಯ ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಕೊಪ್ಪಳ ಜಿಲ್ಲೆಯ ಕ್ರೀಡಾ ವಸತಿ ನಿಲಯದ 17 ವರ್ಷ ವಯೋಮಿತಿಯ ಬಾಲಕಿಯರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಅಕ್ಟೋಬರ್ 16 ರಿಂದ 18ರ ವರೆಗೆ ಜರುಗಿದ ಈ ಪಂದ್ಯಾವಳಿಯಲ್ಲಿ ಕೊಪ್ಪಳದ ತಂಡವು ಮೈಸೂರು ವಿಭಾಗದ ವಿರುದ್ಧ 2-1 ಅಂತರದಲ್ಲಿ ಜಯ ಸಾಧಿಸಿತು. ನಂತರ ನಡೆದ ಪಂದ್ಯಗಳಲ್ಲಿ ಬೆಂಗಳೂರು ವಿಭಾಗದ ವಿರುದ್ಧ 2-0 ನೇರ ಸೆಟ್‌ಗಳಿಂದ ಹಾಗೂ ಬೆಳಗಾವಿ ವಿಭಾಗದ ವಿರುದ್ಧ 2-0 ಅಂತರದಲ್ಲಿ ಭರ್ಜರಿ ಜಯ ದಾಖಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಈ ವಿಜೇತ ತಂಡದಲ್ಲಿ ಕಾವೇರಿ, ಯಲ್ಲಮ್ಮ, ಶಾರದಾ, ಅನಿತಾ, ಎನ್. ಸ್ಪೂರ್ತಿ, ಸ್ಪೂರ್ತಿ, ದುರುಗಮ್ಮ ಹಾಗೂ ಅಕ್ಷತಾ ಅವರು ಕ್ರೀಡಾಪಟುಗಳಾಗಿ ಭಾಗವಹಿಸಿದ್ದರು. ಈ ತಂಡಕ್ಕೆ ತರಬೇತುದಾರರು ಆದ ಸುರೇಶ ಹಾಗೂ ರಾಘವೇಂದ್ರ ಪೈ ಅವರು, ತರಬೇತಿ ಮತ್ತು ಅಗತ್ಯ ಮಾರ್ಗದರ್ಶನ ನೀಡಿದ್ದಾರೆ.

ರಾಷ್ಟ್ರ ಮಟ್ಟಕ್ಕೆ ಆಯ್ಕೆ: ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆಗೈದ ಕೊಪ್ಪಳ ಕ್ರೀಡಾ ವಸತಿ ನಿಲಯದ ಈ ಬಾಲಕಿಯರು, ರಾಜಸ್ಥಾನದಲ್ಲಿ ನಡೆಯಲಿರುವ ಎಸ್.ಜಿ.ಎಫ್.ಐ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ್ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular