HomeIndiaಪಂಜಾಬ್ ನ್ಯಾಷನಲ್ ಬ್ಯಾಂಕ್ ​ನ ಕರೆನ್ಸಿ ಚೆಸ್ಟ್‌ನಲ್ಲಿ 17.29 ಕೋಟಿ ರೂ ಮೌಲ್ಯದ ನಕಲಿ ನೋಟುಗಳು...

ಪಂಜಾಬ್ ನ್ಯಾಷನಲ್ ಬ್ಯಾಂಕ್ ​ನ ಕರೆನ್ಸಿ ಚೆಸ್ಟ್‌ನಲ್ಲಿ 17.29 ಕೋಟಿ ರೂ ಮೌಲ್ಯದ ನಕಲಿ ನೋಟುಗಳು ಪತ್ತೆ: ಮ್ಯಾನೇಜರ್ ಅರೆಸ್ಟ್

ಸಹಾರನ್‌ ಪುರ: ಪಂಜಾಬ್ ನ್ಯಾಷನಲ್ ಬ್ಯಾಂಕ್​ ನ (PNB) ಕರೆನ್ಸಿ ಚೆಸ್ಟ್‌ನಲ್ಲಿ ಬರೋಬ್ಬರಿ 17.29 ಕೋಟಿ ಮೌಲ್ಯದ ನಕಲಿ ನೋಟುಗಳು ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಸಹಾರನ್‌ ಪುರದಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆಯನ್ನು ಚುರುಕುಗೊಳಿಸಿದ್ದು, ತಲೆಮರೆಸಿಕೊಂಡಿದ್ದ ಬ್ಯಾಂಕ್ ಮ್ಯಾನೇಜರ್ ಅಮಿತ್ ಕುಮಾರ್ ಎಂಬಾತನನ್ನು ಬಂಧಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬ್ಯಾಂಕಿನ ಅಧಿಕೃತ ಕರೆನ್ಸಿ ಚೆಸ್ಟ್‌ನೊಳಗೇ ಇಷ್ಟೊಂದು ದೊಡ್ಡ ಪ್ರಮಾಣದ ನಕಲಿ ನೋಟುಗಳು ಪತ್ತೆಯಾಗಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಎನ್ ಐಎ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದಾರೆ.

ಇನ್ನು ಪ್ರಕರಣ ಸಂಬಂಧ ಜಗಾಧ್ರಿ ಕರೆನ್ಸಿ ಚೆಸ್ಟ್ ಮ್ಯಾನೇಜರ್ ಹಾಗೂ ಪ್ರಕರಣದ ಪ್ರಮುಖ ಆರೋಪಿ ಅಮಿತ್ ಕುಮಾರ್ ನನ್ನು ಎನ್‌ಐಎ ಅಧಿಕಾರಿಗಳು ಚಂಡೀಗಢದಲ್ಲಿ ಬಂಧಿಸಿದ್ದಾರೆ. ಲಕ್ನೋದ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಸಹಾರನ್‌ ಪುರ ಪಿಎನ್‌ಬಿ ಶಾಖೆಯಿಂದ ಜೈಪುರದ ರಿಸರ್ವ್ ಬ್ಯಾಂಕ್ ಶಾಖೆಗೆ ಜುಲೈನಲ್ಲಿ ಕಳುಹಿಸಲಾಗಿದ್ದ ನಗದು ಚೀಲಗಳಲ್ಲಿ ವ್ಯತ್ಯಾಸ ಕಂಡುಬಂದಿತ್ತು. ಬಳಿಕ ನಡೆಸಿದ ಆಡಿಟ್‌ನಲ್ಲಿ ನಕಲಿ ನೋಟುಗಳ ಅಕ್ರಮ ಪತ್ತೆಯಾಗಿದೆ.

ನಕಲಿ ನೋಟುಗಳ ದಂಧೆಯಲ್ಲಿ ಭಾಗಿಯಾದ ಆರೋಪದ ಮೇಲೆ ಹಿರಿಯ ಡಿವಿಷನಲ್ ಮ್ಯಾನೇಜರ್ ರವಿ ಕುಮಾರ್ ಕನ್ಸೆ, ಸುಶೀಲ್ ಕುಮಾರ್ ಮತ್ತು ಅಮಿತ್ ಕುಮಾರ್ ಅವರನ್ನು ಪಿಎನ್‌ಬಿ ಬ್ಯಾಂಕ್ ಈಗಾಗಲೇ ಅಮಾನತುಗೊಳಿಸಿದೆ.

ಸ್ಥಳೀಯ ಪೊಲೀಸರು ದಾಖಲಿಸಿಕೊಂಡಿದ್ದ ಪ್ರಕರಣವನ್ನು, ಘಟನೆಯ ಗಂಭೀರತೆ ಪರಿಗಣಿಸಿ ಸೆಪ್ಟೆಂಬರ್ 3 ರಂದು ಎನ್‌ಐಎ ಅಧಿಕಾರಿಗಳು ಪ್ರಕರಣವನ್ನು ತನ್ನ ಸುಪರ್ದಿಗೆ ಪಡೆದು ಆರೋಪಿಗಳ ತನಿಖೆ ಆರಂಭಿಸಿದ್ದಾರೆ.

ಬಂಧಿತ ಆರೋಪಿಗಳು ನೇಪಾಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿತ್ತು. ಪ್ರಕರಣದ ಹಿಂದೆ ನೇಪಾಳ ಜಾಲದ ಲಿಂಕ್ ಇರುವ ಬಗ್ಗೆಯೂ ಶಂಕೆ ವ್ಯಕ್ತವಾಗಿದ್ದು, ಆ ನಿಟ್ಟಿನಲ್ಲಿಯೂ ತನಿಖೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular