HomeKarnatakaBIG NEWS: ನಗರ ಪ್ರದೇಶಗಳಲ್ಲಿ ಕೊಳವೆ ಮೂಲಕ ಅಡುಗೆ ಅನಿಲ ಪೂರೈಕೆಗೆ ನಗರ ಅನಿಲ ವಿತರಣಾ...

BIG NEWS: ನಗರ ಪ್ರದೇಶಗಳಲ್ಲಿ ಕೊಳವೆ ಮೂಲಕ ಅಡುಗೆ ಅನಿಲ ಪೂರೈಕೆಗೆ ನಗರ ಅನಿಲ ವಿತರಣಾ ನೀತಿಗೆ ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯದ ನಗರ ಪ್ರದೇಶಗಳಲ್ಲಿ ಕೊಳವೆ ಮಾರ್ಗದ ಮೂಲಕ ನೈಸರ್ಗಿಕ ಅಡುಗೆ ಅನಿಲ(PNG) ಪೂರೈಕೆ ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿದ ನಗರ ಅನಿಲ ವಿತರಣಾ ನೀತಿ(CGD)ಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಗೃಹಬಳಕೆ ಹಾಗೂ ವಾಣಿಜ್ಯ ಕೈಗಾರಿಕೆಯಲ್ಲಿ ಕೊಳವೆ ಮಾರ್ಗದ ಮೂಲಕ ಪೂರೈಕೆಯಾಗುವ PNG ಹಾಗೂ CNG ಅನಿಲ ಬಳಕೆ ಉತ್ತೇಜಿಸಲು ರಾಜ್ಯದಲ್ಲಿ ಪ್ರತ್ಯೇಕ ನೀತಿ ರೂಪಿಸಲಾಗಿದೆ.

ಈ ನೀತಿಯು ಹಸಿರು ಅನಿಲ ಬಳಕೆಗೆ ಪ್ರೋತ್ಸಾಹ ನೀಡಲಿದೆ. ನಗರಗಳಲ್ಲಿ ಅನಿಲ ಪೂರೈಕೆಗೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸಲು ಮತ್ತು ಅನಿಯಮಿತ ವ್ಯವಸ್ಥೆ ರೂಪಿಸಲು, ಯಾವುದಾದರೂ ಅವಘಡವಾದರೆ ಯಾರನ್ನು ಹೊಣೆಗಾರಿಕೆ ಮಾಡಬೇಕು ಎಂಬ ಹಲವು ಅಂಶಗಳನ್ನು ನೀತಿಯಲ್ಲಿ ಅಳವಡಿಸಲಾಗಿದೆ. ಕೊಳವೆ ಮೂಲಕ ಗ್ಯಾಸ್ ಪೂರೈಕೆ ಮಾಡುವ ಸೇವೆಯನ್ನು ಗೆಲ್ ಸಂಸ್ಥೆ ನೀಡುತ್ತಿದೆ. ನಗರ ಪ್ರದೇಶಗಳಲ್ಲಿ ಕೊಳವೆ ಮಾರ್ಗದ ಮೂಲಕ ನೈಸರ್ಗಿಕ ಅಡುಗೆ ಅನಿಲ ಉತ್ತೇಜನಕ್ಕೆ ರೂಪಿಸಿದ ನಗರ ಅನಿಲ ವಿತರಣಾ ನೀತಿಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular