HomeKarnatakaBREAKING: ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದ ಪೊಕ್ಸೋ ಕೇಸ್ ಆರೋಪಿ ಅರೆಸ್ಟ್

BREAKING: ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದ ಪೊಕ್ಸೋ ಕೇಸ್ ಆರೋಪಿ ಅರೆಸ್ಟ್

ಕಲಬುರಗಿ: ಪೊಲೀಸ್ ಠಾಣೆಯಿಂದ ರಾತ್ರೋ ರಾತ್ರಿ ಪರಾರುಯಾಗಿದ್ದ ಪೊಕ್ಸೋ ಪ್ರಕರಣದ ಆರೋಪಿಯನ್ನು ಕಲಬುರಗಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೋಕ್ಸೋ ಪ್ರಕರಣದ ಆರೋಪಿ ಮಂಜುನಾಥ್ ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದ. ಕಲಬುರಗಿಯಲ್ಲಿ ಈ ಘಟನೆ ನಡೆದಿತ್ತು. ಮಂಜುನಾಥ್ ವಿರುದ್ಧ ವಾರದ ಹಿಂದೆ ಪೋಕ್ಸೋ ಕೇಸ್ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿ ಪೊಲೀಸರು ಠಾಣೆಗೆ ಕರೆತಂದಿದ್ದರು. ಗುರುವಾರ ಮಧ್ಯರಾತ್ರಿ ಆರೋಪಿ ಲಾಕಪ್ ನಿಂದ ಪರಾರಿಯಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೋಕ್ಸೋ ಪ್ರಕರಣದ ಆರೋಪಿ ಲಾಕಪ್ ನಿಂದ ಓಡಿ ಹೋಗುತ್ತಿದ್ದ ದೃಷ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಅಮಾಅಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ಪೊಲೀಸರ ಬೇಜವಬ್ದಾರಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಪರಾರಿಯಾಗಿದ್ದ ಪೋಕ್ಸೋ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ ತೆಲ್ಲೂರು ಬಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಹಾರಾಷ್ಟ್ರದತ್ತ ತೆರಳುತ್ತಿದ್ದ ಈ ವೇಳೆ ಆತನನ್ನು ಬಂಧಿಸಲಾಗಿದೆ.ಪೋಕ್ಸೋ ಕೇಸ್ ಜೊತೆಗೆ ಮತ್ತೊಂದು ಕೇಸ್ ಕೂಡ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular