ಮಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿ ಪೊಲೀಸ್ ಕಸ್ಟಡಿಯಲ್ಲಿದ್ದಾಗ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಮತ್ತೆ ಬಂಧಿಸಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ನೆಕ್ರಾಜೆ ಕೊರೆಕ್ಕಾನದ ಅಶ್ವತ್ಥ (19) ಬಂಧಿತ ಆರೋಪಿ. ಪೊಲೀಸ್ ಕಸ್ಟಡಿಯಿಂದ ಎಸ್ಕೇಪ್ ಆಗಿದ್ದ ಆರೋಪಿ ಆನೆಬಾಗಿಲು ಎಂಬಲ್ಲಿ ಪೊದೆಯೊಂದರಲ್ಲಿ ಅವಿತುಕುಳಿತಿದ್ದ. ಈ ವೇಳೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪೋಕ್ಸೋ ಕೇಸ್ ನಲ್ಲಿ ಬಂಧಿತನಾಗಿದ್ದ ಆರೋಪಿ ಅಶ್ವತ್ಥನನ್ನು ಬುಧವಾರ ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆದಿದ್ದರು. ಕಾಸರಗೋಡು ನಗರ ಠಾಣೆಗೆ ವಿಚಾರಣೆಗೆ ಕರೆತಂದಿದ್ದ ವೇಳೆ ಪೊಲೀಸರ ಕಣ್ತಪ್ಪಿಸಿ ಆರೋಪಿ ಪರಾರಿಯಾಗಿದ್ದ. ತೀವ್ರ ಹುಡುಕಾಟ ನಡೆಸಿದ್ದ ಪೊಲಿಸರು ಇದೀಗ ಪೊದೆಯಲ್ಲಿ ಅಡಗಿ ಕುಳಿತಿದ್ದ ಆರೋಪಿಯನ್ನು ಬಂಧಿಸಿದಾರೆ.
