HomeKarnatakaSP ಕಚೇರಿ ಮೂರನೇ ಮಹಡಿಯಿಂದ ಜಿಗಿದು ಶಿಕ್ಷಕ ಆತ್ಮಹತ್ಯೆ

SP ಕಚೇರಿ ಮೂರನೇ ಮಹಡಿಯಿಂದ ಜಿಗಿದು ಶಿಕ್ಷಕ ಆತ್ಮಹತ್ಯೆ

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಎಸ್ಪಿ ಕಚೇರಿಯ ಮೂರನೇ ಮಹಡಿಯಿಂದ ಜಿಗಿದು ಪೋಕ್ಸೋ ಪ್ರಕರಣದ ಆರೋಪಿಯಾಗಿದ್ದ ದೈಹಿಕ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಜಯನಗರ ಮೂಲದ ಶಶಿಧರ್(49) ಮೃತಪಟ್ಟವರು. ಕಳೆದ 15 ವರ್ಷಗಳಿಂದ ಚನ್ನಪಟ್ಟಣ ತಾಲೂಕಿನ ಅನುದಾನಿತ ಪ್ರೌಢಶಾಲೆಯೊಂದರಲ್ಲಿ ದೈಹಿಕ ಶಿಕ್ಷಕನಾಗಿ ಶಶಿಧರ್ ಕಾರ್ಯ ನಿರ್ವಹಿಸುತ್ತಿದ್ದರು. ಶಾಲೆಯ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಶನಿವಾರ ರಾಮನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪೊಲೀಸರು ಅವರನ್ನು ಬಂಧಿಸಿದ್ದರು.

ರಾಮನಗರ ಮಹಿಳಾ ಠಾಣೆ ಪೊಲೀಸರು ಆರೋಪಿ ಶಶಿಧರ್ ವಿಚಾರಣೆ ನಡೆಸಿದ್ದರು. ಇಂದು ಮುಂಜಾನೆ ಆರೋಪಿಗೆ ವೈದ್ಯಕೀಯ ತಪಾಸಣೆ ಮಾಡಿಸಿದ ನಂತರ ಕಾನೂನು ಪ್ರಕ್ರಿಯೆಯಾಗಿ ಬೆರಳಚ್ಚು ನೋಂದಣಿ ಮಾಡಿಸಲು ಬೆಂಗಳೂರು ದಕ್ಷಿಣ ಜಿಲ್ಲೆಯ ಎಸ್ಪಿ ಕಚೇರಿಗೆ ಕರೆದುಕೊಂಡು ಬರಲಾಗಿದೆ. ಈ ವೇಳೆ ಎಸ್ಪಿ ಕಚೇರಿಯ ಮೂರನೇ ಮಹಡಿಯಲ್ಲಿ ಶಶಿಧರ್ ಬೆರಳಚ್ಚು ಪಡೆಯಲು ಸಿದ್ಧತೆ ನಡೆಸುತ್ತಿದ್ದಾಗ ಶಶಿಧರ್ ಕಟ್ಟಡದಿಂದ ಜಿಗಿದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಮಾರ್ಗ ಮಧ್ಯದಲ್ಲೇ ಶಶಿಧರ್ ಮೃತಪಟ್ಟಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಪೊಲೀಸರ ವಿರುದ್ಧ ಶಶಿಧರ್ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಶಿಧರ್ ವಿರುದ್ಧ ಸುಳ್ಳು ಆರೋಪ ಹೊರಿಸಲಾಗಿದೆ. ಪೊಲೀಸರು ಮತ್ತು ಶಾಲೆಯ ಆಡಳಿತ ಮಂಡಳಿ ಒತ್ತಡದಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

(ಹಕ್ಕುತ್ಯಾಗ: ಈ ಲೇಖನವು ಯಾವುದೇ ರೂಪದಲ್ಲಿ ಸ್ವಯಂ-ಹಾನಿ ಅಥವಾ ಆತ್ಮಹತ್ಯೆಯನ್ನು ಉತ್ತೇಜಿಸಲು, ಪ್ರೋತ್ಸಾಹಿಸಲು ಅಥವಾ ಸಂವೇದನಾಶೀಲಗೊಳಿಸಲು ಉದ್ದೇಶಿಸಿಲ್ಲ. ನೀವು ಅಥವಾ ನಿಮಗೆ ತಿಳಿದಿರುವ ಯಾರಾದರೂ ಭಾವನಾತ್ಮಕ ಯಾತನೆ, ಆತ್ಮಹತ್ಯಾ ಆಲೋಚನೆಗಳು ಅಥವಾ ಮಾನಸಿಕ ಆರೋಗ್ಯ ಬಿಕ್ಕಟ್ಟನ್ನು ಅನುಭವಿಸುತ್ತಿದ್ದರೆ, ದಯವಿಟ್ಟು ತಕ್ಷಣದ ವೃತ್ತಿಪರ ಸಹಾಯವನ್ನು ಪಡೆಯಿರಿ. ಭಾರತದಲ್ಲಿ, ನೀವು AASRA (24/7) ಅನ್ನು ಸಂಪರ್ಕಿಸಬಹುದು: 91-9820466726 ಅಥವಾ ವಿಶ್ವಾಸಾರ್ಹ ಮಾನಸಿಕ ಆರೋಗ್ಯ ವೃತ್ತಿಪರರು, ವೈದ್ಯರು ಅಥವಾ ಸ್ಥಳೀಯ ತುರ್ತು ಸೇವೆಗಳನ್ನು ಸಂಪರ್ಕಿಸಬಹುದು.)

ಅಟೆಂಡರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಗ್ರಾಮಾಭಿವೃದ್ಧಿ ಹಾಗೂ ಸ್ವ-ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562123 ಇಲ್ಲಿ ಅಟೆಂಡರ್ ಹುದ್ದೆಯ ಒಂದು ಖಾಲಿ ಇದ್ದು, 22 ರಿಂದ 30 ವಯೋಮಾನದ ಯುವಕ/ಯುವತಿಯರು ಅರ್ಜಿಯನ್ನು ಸಲ್ಲಿಸಬಹುದು.

ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅರ್ಹ ಯುವಕ/ಯುವತಿಯರು ಕನ್ನಡ ಭಾಷೆಯಲ್ಲಿ ಪರಿಣಿತಿಯನ್ನು ಹೊಂದಿರಬೇಕು.

ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟವನ್ನು ಇ-ಮೇಲ್ : [email protected] ಮುಖಾಂತರ ಮಾತ್ರ ಸೆಪ್ಟೆಂಬರ್ 30 ರೊಳಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9113880324 ಇಲ್ಲಿ ಸಂಪರ್ಕಿಸಬಹುದು ಎಂದು ರುಡ್ ಸೆಟ್ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೀನುಗಾರಿಕೆ ಸಲಕರಣೆ ವಿತರಣೆ: ಅರ್ಜಿ ಆಹ್ವಾನ

ಮಡಿಕೇರಿ: ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ವಲಯ ಒಳನಾಡು ಮೀನುಗಾರಿಕೆ ಅಭಿವೃದ್ಧಿ ಸಹಾಯ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತ್ತು ಸಮಗ್ರ ಮೀನುಗಾರಿಕೆ ಅಭಿವೃದ್ಧಿ ಯೋಜನೆಯಡಿ ಸಾಮಾನ್ಯ ವರ್ಗದ ಮೀನು ಕೃಷಿಕರಿಗೆ ಮೀನು ಹಿಡಿಯುವ ಸಲಕರಣೆಗಳನ್ನು ಉಚಿತವಾಗಿ ವಿತರಿಸಲು ಸೇವಾ ಸಿಂಧು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮೀನುಗಾರರಿಗೆ/ ಮೀನು ಕೃಷಿಕರಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್, 05 ರ ಸಂಜೆ 5.30 ಗಂಟೆ ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಪೂರ್ಣ/ ಅರೆಕಾಲಿಕ ಮೀನುಗಾರರಾಗಿರಬೇಕು. ಕೊಡಗು ಜಿಲ್ಲೆಯಲ್ಲಿ ನೆಲೆಸಿರಬೇಕು. ಅರ್ಜಿಯೊಂದಿಗೆ ಭಾವಚಿತ್ರ-2, ವಿಳಾಸ ಪುರಾವೆ ಮತ್ತು ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ನೂತನ ಆರ್‍ಡಿ ಸಂಖ್ಯೆ ಒಳಗೊಂಡಿರಬೇಕು). ಮೀನುಗಾರಿಕೆಯಲ್ಲಿ ತೊಡಗಿರುವ ಕುರಿತು ದೃಢೀಕರಣ ಪ್ರಮಾಣ ಪತ್ರ/ಪರವಾನಗಿ ಪ್ರತಿ, ಪಡಿತರ ಚೀಟಿ ಅಥವಾ ಇತರೆ ದಾಖಲಾತಿಗಳ ಪ್ರತಿ ಸಲ್ಲಿಸಬೇಕು.

ಆಯ್ಕೆ ಪ್ರಕ್ರಿಯೆ ಪ್ರಕಾರದ ನಿಯಮಾನುಸಾರ ನಿಗದಿಪಡಿಸಿರುವ ಗುರಿ ರೀತ್ಯಾ ಮಾಡಲಾಗುವುದು. ನಿಗದಿಪಡಿಸಿರುವ ಗುರಿಗಿಂತ ಹೆಚ್ಚಿನ ಅರ್ಜಿಗಳು ಸ್ವೀಕೃತವಾಗಿದ್ದಲ್ಲಿ ಜಿಲ್ಲಾ ಪಂಚಾಯತ್ ಫಲಾನುಭವಿ ಆಧಾರಿತ ಕಾರ್ಯಕ್ರಮಗಳ ಆಯ್ಕೆ ಸಮಿತಿಯಿಂದ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಕಚೇರಿಯ ಸಮಯದಲ್ಲಿ ತಾಲ್ಲೂಕು ಕಚೇರಿಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಸಚಿನ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular