HomeKarnatakaBIG NEWS: ಪೋಕ್ಸೋ ಪ್ರಕರಣ: ಬಿಎಸ್ ವೈಗೆ ಖುದ್ದು ಹಾಜರಾತಿಯಿಂದ ವಿನಾಯಿತಿ; ಹೈಕೋರ್ಟ್ ಮಧ್ಯಂತರ ಆದೇಶ

BIG NEWS: ಪೋಕ್ಸೋ ಪ್ರಕರಣ: ಬಿಎಸ್ ವೈಗೆ ಖುದ್ದು ಹಾಜರಾತಿಯಿಂದ ವಿನಾಯಿತಿ; ಹೈಕೋರ್ಟ್ ಮಧ್ಯಂತರ ಆದೇಶ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಹಾಗೂ ಇತರ ಆರೋಪಿಗಳಿಗೆ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಹೈಗೋರ್ಟ್ ಮದ್ಯಂತರ ಆದೇಶ ಹೊರಡಿಸಿದೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ಅರ್ಜಿ ವಿಚಾರಣೆಯನ್ನು ಜುಲೈ 26ರವರೆಗೆ ಮುಂದೂಡಿದೆ.

ಅಲ್ಲಿಯವರೆಗೂ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಇತರ ಆರೋಪಿಗಳಿಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಆರೋಪಿಗಳ ಬದಲು ವಕೀಲರಿಗೆ ವಿನಾಯಿತಿ ಕೊರಲು ಅವಕಾಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular