HomeKarnatakaBIG NEWS: ಪೋಕ್ಸೋ ಪ್ರಕರಣ: ಬಾಲಮಂಜುನಾಥ ಸ್ವಾಮೀಜಿಯದ್ದು ಎನ್ನಲಾದ ವಿಡಿಯೋ ವೈರಲ್

BIG NEWS: ಪೋಕ್ಸೋ ಪ್ರಕರಣ: ಬಾಲಮಂಜುನಾಥ ಸ್ವಾಮೀಜಿಯದ್ದು ಎನ್ನಲಾದ ವಿಡಿಯೋ ವೈರಲ್

ತುಮಕೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಬಾಲಮಂಜುನಾಥ ಸ್ವಾಮೀಜಿ ಅವರದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

ಬಾಲಕಿ ಜೊತೆ ವಿಡಿಯೋ ಕಾಲ್ ನಲ್ಲಿ ಬೆತ್ತಲಾಗಿ ಮಾತನಾಡುತ್ತಿರುವ 37 ಸೆಕೆಂಡ್ ಗಳ ವಿಡಿಯೋ ವೈರಲ್ ಆಗಿದೆ ಎನ್ನಲಾಗಿದೆ. ಈಗಾಗಲೇ ಬಾಲಮಂಜುನಾಥ್ ಸ್ವಾಮೀಜಿ ಹಾಗೂ ಅವರ ಆಪ್ತ ಸಹಾಯಕ ಸೇರಿದಂತೆ ಮೂವರ ವಿರುದ್ಧ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಹುಲಿಯೂರು ದುರ್ಗ ಪೊಲೀಸರು ಬಂಧಿಸಿದ್ದಾರೆ.

ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ತನಿಖೆ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular