ಬೆಳಗಾವಿ: ನಾಲ್ಕು ವರ್ಷದ ಬಾಲಕಿಗೆ ಚಾಕೋಲೇಟ್ ಆಸೆ ತೋರಿಸಿ ಕರೆದೊಯ್ದು ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಕಳೆದ ವರ್ಷ ಫೆಬ್ರವರಿ 24ರಂದು ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ನಾಲ್ಕು ವರ್ಷದ ಬಾಲಕಿಗೆ ಚಾಕಲೇಟ್ ಕೊಟ್ಟು ಪುಸಲಾಯಿಸಿ ನಿಸಾರ್ ಅಹ್ಮದ್ ಫಕ್ರು ಸಾಬ್ ಚಾಪ್ಗಾವಿ ಎಂಬ 68 ವರ್ಷದ ವೃದ್ಧ ತನ್ನ ಮನೆಗೆ ಬಾಲಕಿಯನ್ನು ಕರೆದೊಯ್ದು ಬಾಅಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ.
ನಿಸಾರ್ ಅಹ್ಮದ್ ಫಕ್ರು ಸಾಬ್ ಚಾಪ್ಗಾವಿ ವಿರುದ್ಧ ನಂದಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ತನಿಖೆ ಪೂರೈಸಿ ಪೋಕ್ಸೋ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾಧ ಸಿ. ಎಮ್ ಪುಷ್ಪಲತಾ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂಪಾಯಿಗಳ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಕಾಮುಕ ಬೆಳಗಾವಿ ಹಿಂಡಲಗಾ ಜೈಲು ಸೇರಿದ್ದಾನೆ.