ಬೆಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 52 ವರ್ಷದ ಮಹಿಳೆ ವಿರುದ್ಧದ ಪೋಕ್ಸೋ ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದ್ದು, ಮಹಿಳೆಯ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ.
ಘಟನೆ ನಡೆದು 4 ವರ್ಷಗಳ ಬಳಿಕ ಕೇಸ್ ದಾಖಲಾಗಿದೆ. ಮಹಿಳೆಗೆ ಪೋಕ್ಸೋ ಕಾಯ್ದೆ ಅನ್ವಯವಾಗಲ್ಲ ಎಂದು ಮಹಿಳೆಯ ಪರ ವಕೀಲರು ವಾದ ಮಂಡಿಸಿದ್ದರು. ಅಲ್ಲದೇ ಮಹಿಳೆ ಬಾಲಕನ ಮೇಲೆ ಅತ್ಯಾಚಾರ ಎಸಗಲು ಸಾಧ್ಯವಿಲ್ಲ ಎಂದು ವಾದಿಸಿದ್ದರು. ಈ ವಾದವನ್ನು ಹೈಕೋರ್ಟ್ ತಿರಸ್ಕರಿಸಿದೆ.
18 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಕ್ಸೋ ಕಾಯ್ದೆಯ ರಕ್ಷಣೆಯಿದೆ. ಹೆಣ್ಣುಮಕ್ಕಳ ರೀತಿ ಗಂಡುಮಕ್ಕಳಿಗೂ ರಕ್ಷಣೆ ಇದೆ. ವರದಿಗಳ ಪ್ರಕಾರ ಗಂಡು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಶೇ. 54.4ರಷ್ಟಿದೆ. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಶೇ.45.6 ರಷ್ಟಿದೆ. ಪೋಕ್ಸೋ ಕಾಯ್ದೆಗೆ ಲಿಂಗಬೇಧವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.