ಕಲಬುರಗಿ: 14 ವರ್ಷದ ಬಾಲಕನ ಮೇಲೆ 16 ವರ್ಷದ ಹುಡುಗನೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನಡೆದಿದೆ.
ಈ ಬಗ್ಗೆ ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಕ್ಸೋ ಕಾಯ್ದೆಯಡಿ ಎಫ್ ಐ ಆರ್ ದಾಖಲಾಗಿದ್ದು, ೧೬ ವರ್ಷದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಶಹಬಾದ್ ರಸ್ತೆಯಲ್ಲಿರುವ ಪಟ್ಟಣದ ಹಳೆಯ ಕಟ್ಟಡದ ಆವರಣದಲ್ಲಿ ಆ.26ರಂದು ಯುವಕ ಬಾಲಕನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಸಂತ್ರಸ್ತ ಬಾಲಕ ತನ್ನ ತಾಯಿ ಬಳಿ ವಿಷಯ ಹೇಳಿದ್ದು, ತಾಯಿ ಚಿತ್ತಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದ್ದು, ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.