ಬೆಂಗಳೂರು, ನೈತಿಕ ಪೊಲೀಸ್ ಗಿರಿ, ಐವರು, ಪೊಲೀಸರು, ಬಂಧನಬೆಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಐದು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಒಬ್ಬ ಅಪ್ರಾಪ್ತ ಸೇರಿದಂತೆ ಐದು ಜನರನ್ನು ಬಂಧಿಸಲಾಗಿದೆ.
ಮಹೀಮ್. ಆಫ್ರಿದಿ, ವಾಸೀಂ, ಅಂಜುಮ್ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಶನಿವಾರ ಸಂಜೆ ಸುವರ್ಣ ಲೇಔಟ್ ನ ಉದ್ಯಾನವನದಲ್ಲಿ ನೈತಿಕ ಪೊಲೀಸ್ ಗಿರಿ ನಡಿಸಿದ್ದರು. ಬುರ್ಖಾ ಧರಿಸಿ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಕುಳಿತಿದ್ದ ಯುವತಿಯನ್ನು ಬೆದರಿಸಿದ್ದರು.
ಯುವಕ, ಯುವತಿ ಮಾತನಾಡುತ್ತಿದ್ದಾಗ ಸ್ಥಳಕ್ಕೆ ಬಂದ ಐವರು ಮುಸ್ಲಿಂ ಯುವಕರು ನಿಂದಿಸಿ, ಬುರ್ಖಾ ಧರಿಸಿ ಹಿಂದೂ ಯುವಕನ ಜೊತೆಗೆ ಯಾಕೆ ಕುಳಿತು ಕೊಂಡಿದ್ದೀಯಾ? ನಿಮ್ಮ ಮನೆಯವರ ಫೋನ್ ನಂಬರ್ ಕೊಡು ಎಂದು ಬೆದರಿಸಿದ್ದರು. ಕ್ಯಾತೆ ತೆಗೆದು ಗಲಾಟೆ ಮಾಡಿದ್ದರು. ಅಲ್ಲದೆ, ಯುವಕನ ಮೇಲೆ ಹಲ್ಲೆಗೂ ಯತ್ನಿಸಿದ್ದರು.
ನನ್ನ ಕ್ಲಾಸ್ಮೇಟ್ ಜೊತೆಗೆ ಮಾತನಾಡುತ್ತಿದ್ದೇನೆ ಎಂದು ಯುವತಿ ಹೇಳಿದರೂ ಕೇಳದೆ ಹಲ್ಲೆಗೆ ಯತ್ನಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಚಂದ್ರಾ ಲೇಔಟ್ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.