HomeKarnatakaBREAKING: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಅರೆಸ್ಟ್

BREAKING: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಅರೆಸ್ಟ್

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಬಂಧಿತ ಆರೋಪಿಗಳು. ವಿಧಾನಸೌಧ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದುಕೊಂಡು ಹೋಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತೀಚೆಗಷ್ಟೇ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಜಯಗಳಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು, ವಿವಾದಕ್ಕೆ ಕಾರಣವಾಗಿತ್ತು. ರಾಜಕೀಯ ಆರೋಪ ಪ್ರತ್ಯಾರೋಪಗಳ ನಡುವೆ ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಎಫ್.ಎಸ್.ಎಲ್. ವರದಿ ಆಧರಿಸಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular