HomeKarnatakaBIG NEWS: ಪೊಲೀಸರ ಹಲ್ಲೆಯಿಂದ ವ್ಯಕ್ತಿ ಸಾವು ಆರೋಪ: ಇನ್ಸ್ ಪೆಕ್ಟರ್ ವಿರುದ್ಧ ಸಿಎಂಗೆ ದೂರು...

BIG NEWS: ಪೊಲೀಸರ ಹಲ್ಲೆಯಿಂದ ವ್ಯಕ್ತಿ ಸಾವು ಆರೋಪ: ಇನ್ಸ್ ಪೆಕ್ಟರ್ ವಿರುದ್ಧ ಸಿಎಂಗೆ ದೂರು ನೀಡಿದ ಪತ್ನಿ

ಬೆಂಗಳೂರು: ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನ ಮೇಲೆ ಪೊಲೀಸರು ಹಲ್ಲೆ ನಡೆಸಿ ಆತನ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿ ಮೃತನ ಪತ್ನಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ.

ಕೋಣನಕುಂಟೆ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಪಾಪಣ್ಣ ವಿರುದ್ಧ ಮೃತ ವ್ಯಕ್ತಿ ರಾಮಸ್ವಾಮಿ ಪತ್ನಿ ಮುನಿಯಮ್ಮ ಸಿಎಂ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ.

ತನ್ನ ಪತಿಯ ಸಾವಿಗೆ ಇನ್ಸ್ ಪೆಕ್ಟರ್ ಪಾಪಣ್ಣ ಕಾರಣ. ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಇನ್ಸ್ ಪೆಕ್ಟರ್ ಪಾಪಣ್ಣ, ತಮ್ಮ ಜಮೀನಿನ ಬಳಿ ಬಂದು ಪತಿ ಮೇಲೆ ಹಲ್ಲೆ ನಡೆಸಿದ್ದಾರೆ. ಸೆ.13ರಂದು ತನ್ನ ಪತಿ ಸಾವನ್ನಪ್ಪಿದ್ದಾರೆ. ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಪೊಲೀಸರ ವಿರುದ್ಧ ಕ್ರಮ ಕೈಗೊಂಡು ಪಾರದರ್ಶಕ ತನಿಖೆ ನಡೆಸಿ, ನ್ಯಾಯ ಕೊಡಿಸುವಂತೆ ಮಹಿಳೆ ದೂರಿನಲ್ಲಿ ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular