BIG NEWS: ವಿಕಲಚೇತನನ ಮೇಲೆ ಪೊಲೀಸರಿಂದ ಹಲ್ಲೆ ಪ್ರಕಣ; ಗೃಹ ಸಚಿವರು ಹೇಳಿದ್ದೇನು?

ಬೆಳಗಾವಿ: ವಿಕಲಚೇತನನ ಮೇಲೆ ಪೊಲೀಸ್ ಸಿಬ್ಬಂದಿಯೇ ರಸ್ತೆಯಲ್ಲಿ ಮನಸೋ ಇಚ್ಛೆ ಥಳಿಸಿ, ಅಮಾನವೀಯವಾಗಿ ನಡೆದುಕೊಂಡ ಘಟನೆ ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಉದ್ಯಮಬಾಗ ವ್ಯಾಪ್ತಿಯಲ್ಲಿ ನಡೆದಿತ್ತು. ಪೊಲೀಸರ ವರ್ತನೆಗೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿತ್ತು. ಸಾಮಾಜಿಕ ಜಲತಾಣಗಳಲ್ಲಿಯೂ ವಿಡಿಯೋ ವೈರಲ್ ಆಗಿತ್ತು. ಆದರೆ ವಿಕಲಚೇತನ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾರಿಕೆ ಉತ್ತರ ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಉದ್ಯಮಬಾಗ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವಿಕಲಚೇತನನ ಮೇಲೆ ಪೊಲೀಸರೇ ಹಲ್ಲೆ ನಡೆಸಿದ ಪ್ರಜರನವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜನಸ್ನೇಹಿ ಪೊಲೀಸ್ ವ್ಯವಸ್ಥೆ ನೀಡಬೇಕು ಎನ್ನುವ ಉದ್ದೇಶದಿಂದ ಎಲ್ಲ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಸಭೆ ಕರೆದು ಪರಿಶೀಲನೆ ನಡೆಸುತ್ತೇನೆ ಎಂದಿದ್ದಾರೆ.

ಹಿಂಡಲಗಾ ಕಾರಾಗೃಹದಲ್ಲಿ ಅಕ್ರಮ ಹಾಗೂ ಸಿಬ್ಬಂದಿಗಳು ಕೈದಿಗಳಿಗೆ ಕಿರುಕುಳ ನೀಡುತ್ತಿರುವ ವಿಚರವಾಗಿ ಪ್ರತಿಕ್ರಿಯಿಸಿದ ಸಚಿವರು,ಇತ್ತೀಚೆಗೆ ಇಂಥ ಘಟನೆಗಳು ನಡೆಯುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಶೀಘ್ರದಲ್ಲೇ ಕಾರಾಗೃಹಕ್ಕೆ‌ ಭೇಟಿ‌ ನೀಡಲಿದ್ದೇನೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read