ಜಗಳ ಬಿಡಿಸಲು ಬಂದ ಪೊಲೀಸ್ ಮೇಲೆ ಮಾರಣಾಂತಿಕ ಹಲ್ಲೆ

ಹಾಸನ: ಜಗಳ ಬಿಡಿಸಲು ಹೋದ ಪೊಲೀಸ್ ಮೇಲೆ ಲಾಂಗ್ ಹಾಗೂ ಕಲ್ಲುಗಳಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಯಸಳೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶರತ್ ಹಲ್ಲೆಗೊಳಗಾದವರು. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮಳಲಿ ದೇವಸ್ಥಾನದಲ್ಲಿ ಘಟನೆ ನಡೆದಿದೆ. ಕುಂದೂರು ಹೋಬಳಿ ಎಸ್. ಹೊನ್ನೇನಹಳ್ಳಿ ಗ್ರಾಮದ ಶರತ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಜೂನ್ 15ರಂದು ರಜೆ ಪಡೆದು ದೀಪಕ್ ಎಂಬುವರ ಮಗಳ ಹುಟ್ಟುಹಬ್ಬ ಕಾರ್ಯಕ್ರಮಕ್ಕಾಗಿ ಅವರು ಮಳಲಿ ದೇವಸ್ಥಾನಕ್ಕೆ ಬಂದಿದ್ದರು.

ದೇವಸ್ಥಾನ ಸಮೀಪದ ಕನ್ವೆನ್ಷನ್ ಹಾಲ್ ಬಳಿ ಚೇತನ್ ಎಂಬ ಯುವಕನಿಗೆ ಗ್ರಾಮದ ಯುವಕರ ಗುಂಪು ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡುತ್ತಿತ್ತು. ಈ ವೇಳೆ ಜಗಳ ಬಿಡಿಸಲು ಹೋಗಿದ್ದ ಶರತ್ ಮೇಲೆ ಕಲ್ಲು ಮತ್ತು ಲಾಂಗ್ ನಿಂದ ಹಲ್ಲೆ ಮಾಡಲಾಗಿದೆ. ಮಿಥುನ್, ಲೋಹಿತ್, ನಟರಾಜ ಮತ್ತು ಇತರರು ಹಲ್ಲೆ ಮಾಡಿದ್ದು, ಸ್ಥಳದಲ್ಲೇ ಶರತ್ ಕುಸಿದುಬಿದ್ದಿದ್ದಾರೆ. ಅವರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read