ಮಹಿಳೆಗೆ ಬೆದರಿಕೆ ಹಾಕಿದ ಆರೋಪ; ಬಾಲಿವುಡ್ ನಟನ ವಿರುದ್ದ ಕೇಸ್

43 ವರ್ಷದ ಮಹಿಳೆಗೆ ಬೆದರಿಕೆ ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಗಳನ್ನು ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಬಾಲಿವುಡ್ ನಟ ಸಾಹಿಲ್ ಖಾನ್ ಮತ್ತು ಆರೋಪಿತ ಮಹಿಳೆಯ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ದೂರಿನ ಪ್ರಕಾರ ಓಶಿವಾರ ಉಪನಗರ ನಿವಾಸಿಯಾದ 43 ವರ್ಷದ ಮಹಿಳೆ ಫೆಬ್ರವರಿ 2023 ರಲ್ಲಿ ಹಣಕ್ಕಾಗಿ ಜಿಮ್‌ನಲ್ಲಿ ಮಹಿಳೆಯೊಂದಿಗೆ ಜಗಳವಾಡಿದ್ದರು. ನಂತರ ಆರೋಪಿ ಮಹಿಳೆ ಮತ್ತು ಸಾಹಿಲ್ ಖಾನ್ ದೂರುದಾರರನ್ನು ನಿಂದಿಸಿ ಬೆದರಿಕೆ ಹಾಕಿದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಗಳಿಬ್ಬರು, ದೂರುದಾರರು ಮತ್ತು ಆಕೆಯ ಕುಟುಂಬ ಸದಸ್ಯರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಗಳನ್ನು ಅಪ್‌ಲೋಡ್ ಮಾಡಿದ್ದಾರೆ ಎಂದು ಪ್ರಥಮ ಮಾಹಿತಿ ವರದಿಯಲ್ಲಿ (ಎಫ್‌ಐಆರ್) ಉಲ್ಲೇಖಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ (IPC) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮಾನನಷ್ಟ, ಬೆದರಿಕೆ ಮತ್ತು ಮಹಿಳೆಯ ನಮ್ರತೆಯನ್ನು ಅವಮಾನಿಸುವ ಪ್ರಯತ್ನಕ್ಕಾಗಿ ಓಶಿವಾರಾ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಆರೋಪಿ ಮಹಿಳೆಯು ದೂರುದಾರರ ಪತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಾಹಿಲ್ ಖಾನ್ ಸ್ಟೈಲ್, ಎಕ್ಸ್‌ಕ್ಯೂಸ್ ಮಿ, ಅಲ್ಲಾದೀನ್ ಸೇರಿದಂತೆ ಕೆಲ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read