ರಾಜ್ಯದ ಪೊಲೀಸರ ಮಕ್ಕಳಿಗೆ ಸಿಎಂ ಗುಡ್ ನ್ಯೂಸ್: ಪಬ್ಲಿಕ್ ಶಾಲೆ ತೆರೆಯುವುದಾಗಿ ಘೋಷಣೆ

ಬೆಂಗಳೂರು: ರಾಜ್ಯದ ಪೊಲೀಸರ ಮಕ್ಕಳಿಗಾಗಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ರಸ್ತೆಯ ಸಿಎಆರ್ ಕೇಂದ್ರ ಸ್ಥಾನದಲ್ಲಿ ಸೋಮವಾರ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದ ಸಿಎಂ, ಪೊಲೀಸರು ಮುಕ್ತವಾಗಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಸರ್ಕಾರ ಸಹಕಾರ ನೀಡಲಿದೆ ಎಂದು ಹೇಳಿದ್ದಾರೆ.

ಪೊಲೀಸ್ ಸಿಬ್ಬಂದಿ ಹಿತರಕ್ಷಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ 2025 ರಲ್ಲಿ 10,000 ಪೋಲಿಸ್ ವಸತಿಗೃಹಗಳ ನಿರ್ಮಾಣಕ್ಕೆ 2000 ಕೋಟಿ ರೂ. ನೀಡಲಾಗಿದೆ. 200 ಕೋಟಿ ರೂಪಾಯಿ ವೆಚ್ಚದಲ್ಲಿ 100 ಹೊಸ ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read