ವಿಕಲಚೇತನರನ್ನು ಅಪಹಾಸ್ಯ ಮಾಡಿದ ಯುವರಾಜ್ ಸಿಂಗ್, ರೈನಾ ಸೇರಿ ಮಾಜಿ ಕ್ರಿಕೆಟಿಗರ ವಿರುದ್ಧ ದೂರು

ನವದೆಹಲಿ: ವಿಕಲಾಂಗರನ್ನು ಅಪಹಾಸ್ಯ ಮಾಡಿದ ಆರೋಪದ ಮೇಲೆ ಮಾಜಿ ಕ್ರಿಕೆಟಿಗರಾದ ಹರ್ಭಜನ್ ಸಿಂಗ್, ಸುರೇಶ್ ರೈನಾ, ಯುವರಾಜ್ ಸಿಂಗ್ ಮತ್ತು ಗುರುಕೀರತ್ ಮಾನ್ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.

ರಾಷ್ಟ್ರೀಯ ಅಂಗವಿಕಲರ ಉದ್ಯೋಗ ಉತ್ತೇಜನ ಕೇಂದ್ರದ(ಎನ್‌ಸಿಪಿಇಡಿಪಿ) ಕಾರ್ಯನಿರ್ವಾಹಕ ನಿರ್ದೇಶಕ ಅರ್ಮಾನ್ ಅಲಿ ಅವರು ಇಲ್ಲಿನ ಅಮರ್ ಕಾಲೋನಿ ಪೊಲೀಸ್ ಠಾಣೆಯ ಎಸ್‌ಹೆಚ್‌ಒ ಅವರಿಗೆ ದೂರು ನೀಡಿದ್ದಾರೆ.

ಕ್ರಿಕೆಟಿಗರಲ್ಲದೆ, ಮೆಟಾ ಇಂಡಿಯಾದ ಉಪಾಧ್ಯಕ್ಷೆ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಸಂಧ್ಯಾ ದೇವನಾಥನ್ ವಿರುದ್ಧವೂ ದೂರು ದಾಖಲಾಗಿದೆ.

ದೂರಿನಲ್ಲಿ, ಮೆಟಾ ಒಡೆತನದ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಇನ್‌ಸ್ಟಾಗ್ರಾಮ್, ಅಂತಹ ವಿಷಯವನ್ನು ಪೋಸ್ಟ್ ಮಾಡಲು ಅವಕಾಶ ನೀಡುವ ಮೂಲಕ ಮಾಹಿತಿ ತಂತ್ರಜ್ಞಾನ ಕಾಯ್ದೆ, 2000 ಅನ್ನು ಉಲ್ಲಂಘಿಸಿದೆ ಎಂದು ಆರೋಪಿಸಲಾಗಿದೆ.

ಅಮರ್ ಕಾಲೋನಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸ್ವೀಕರಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆಗಾಗಿ ಜಿಲ್ಲೆಯ ಸೈಬರ್ ಸೆಲ್‌ಗೆ ಹಂಚಿಕೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಫೈನಲ್‌ನಲ್ಲಿ ಭಾರತ ಚಾಂಪಿಯನ್ಸ್ ಐದು ವಿಕೆಟ್‌ಗಳಿಂದ ಪಾಕಿಸ್ತಾನ ಚಾಂಪಿಯನ್‌ಗಳನ್ನು ಸೋಲಿಸಿದ ನಂತರ ಮಾಜಿ ಕ್ರಿಕೆಟಿಗರು ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ವೀಡಿಯೊದಲ್ಲಿ, ಯುವರಾಜ್ ಸಿಂಗ್, ಹರ್ಭಜನ್ ಸಿಂಗ್ ಮತ್ತು ರೈನಾ ತಮ್ಮ ದೇಹದ ಮೇಲೆ ಪಂದ್ಯಗಳಿಂದ ಉಂಟಾಗುವ ದೈಹಿಕ ಹಾನಿಯನ್ನು ತೋರಿಸಲು ಕುಂಟುತ್ತಾ ಓಡಾಡಿದ್ದಾರೆ.

ಅಂಗವಿಕಲರ ಹಕ್ಕುಗಳ ರಾಷ್ಟ್ರೀಯ ವೇದಿಕೆಯು ವೀಡಿಯೊವನ್ನು “ಸಂಪೂರ್ಣ ಅವಮಾನಕರ” ಎಂದು ಹೇಳಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read