ಚಾಮರಾಜನಗರ: ಕರ್ತವ್ಯನಿರತ ಪೊಲೀಸ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ರಾಮಾಪುರದಲ್ಲಿ ಶನಿವಾರ ನಡೆದಿದೆ.
ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಆಲಬಾವಿ ಗ್ರಾಮದ ಪರಶುರಾಮ(31) ಮೃತಪಟ್ಟ ಪೊಲೀಸ್ ಕಾನ್ಸ್ಟೇಬಲ್. ಹನೂರು ತಾಲೂಕಿನ ರಾಮಾಪುರ ಪೊಲೀಸ್ ಠಾಣೆಯಲ್ಲಿ ಮೂರು ವರ್ಷಗಳಿಂದ ಪರಶುರಾಮ ಕಾರ್ಯನಿರ್ವಹಿಸುತ್ತಿದ್ದರು.
ಶನಿವಾರ ಬೆಳಗ್ಗೆ ಸಹೋದ್ಯೋಗಿಗಳೊಂದಿಗೆ ಮಾತನಾಡಿ ಕರ್ತವ್ಯದಲ್ಲಿ ತೊಡಗಿಕೊಂಡಿದ್ದ ಅವರಿಗೆ ಹೃದಯಾಘಾತ ಉಂಟಾಗಿದ್ದು, ಕೂಡಲೇ ಸಹೋದ್ಯೋಗಿಗಳು ಅವರನ್ನು ರಾಮಾಪುರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚನೆ ನೀಡಿದ್ದಾರೆ. ಕಾರ್ ನಲ್ಲಿ ಜಿಲ್ಲಾಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆ ಪರಶುರಾಮ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ಕುಳಿತು ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಏಕಾಏಕಿ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದ ಪರಶುರಾಮ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.