ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದೆ. ನಗರ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ (CAR/DAR) ಹುದ್ದೆಗಳಿಗೆ ಸೆಪ್ಟೆಂಬರ್ 6ರಂದು ನಡೆದ ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಪರೀಕ್ಷೆ ನಡೆದ ಕೇವಲ ಐದು ದಿನಗಳಲ್ಲಿ ಪ್ರಕಟಿಸಲಾಗಿದೆ.
ಪರೀಕ್ಷೆ ನಡೆದ ದಿನವೇ ಅಭ್ಯರ್ಥಿಗಳ ಒಎಂಆರ್ ಪ್ರತಿಗಳನ್ನು ಸ್ಕ್ಯಾನ್ ಮಾಡಿ, ಪರೀಕ್ಷಾ ಕೇಂದ್ರವಾರು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಸೆಪ್ಟೆಂಬರ್ 7ರಂದು ಕೀ ಉತ್ತರ ಪ್ರಕಟಿಸಿ, ಸೆಪ್ಟೆಂಬರ್ 9ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ನಂತರ ಸೆಪ್ಟೆಂಬರ್ 10ರಂದು ಪರಿಷ್ಕೃತ ಕೀ ಉತ್ತರ ಪ್ರಕಟಿಸಲಾಗಿದ್ದು, ಇದೀಗ ತಾತ್ಕಾಲಿಕ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ.
ಫಲಿತಾಂಶಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶ
ಫಲಿತಾಂಶದ ಬಗ್ಗೆ ಆಕ್ಷೇಪಣೆಗಳಿದ್ದರೆ ಅಭ್ಯರ್ಥಿಗಳು ಸೆಪ್ಟೆಂಬರ್ 14ರ ಸಂಜೆ 5.30ರೊಳಗೆ ಸಲ್ಲಿಸಬಹುದು. ಪೂರಕ ದಾಖಲೆಗಳೊಂದಿಗೆ ನಿಗದಿತ ಲಿಂಕ್ ಮೂಲಕ ಆಕ್ಷೇಪಣೆ ಸಲ್ಲಿಸುವಂತೆ KEA ಸೂಚಿಸಿದೆ.
ಫಲಿತಾಂಶ ನೋಡುವುದು ಹೇಗೆ?
KEA ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
CAR/DAR ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆಯ ಫಲಿತಾಂಶದ ಲಿಂಕ್ ಆಯ್ಕೆ ಮಾಡಿ.
ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ.
ಲಾಗಿನ್ ಮಾಡಿದ ಬಳಿಕ ಸ್ಕೋರ್‌ಕಾರ್ಡ್ ಪರಿಶೀಲಿಸಿ.
ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಬಹುದು.
ಫಲಿತಾಂಶ ಮತ್ತು ಆಕ್ಷೇಪಣೆ ಸಲ್ಲಿಕೆ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು KEA ಅಧಿಕೃತ ವೆಬ್‌ಸೈಟ್ ಪರಿಶೀಲಿಸುವಂತೆ ಸೂಚಿಸಲಾಗಿದೆ.

