ಹಾಸನ: ಮೂಳೆ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಗೆಂಡೆಕಟ್ಟೆ ಫಾರೆಸ್ಟ್ ಬಳಿ ನಡೆದಿದೆ.
38 ವರ್ಷದ ನಟೇಶ್ ಆತ್ಮಹತ್ಯೆಗೆ ಶರಣಾದ ಕಾನ್ಸ್ ಟೇಬಲ್. ಅರಕಲಗೂಡು ತಾಲೂಕಿನ ಚಿಕ್ಕಬೊಮ್ಮನಹಳ್ಳಿ ಗ್ರಾಮದ ನಟೇಶ್, ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಮೂರು ತಿಂಗಳಿಂದ ಮೂಳೆ ಕ್ಯಾನ್ಸರ್ ನಿಂದ ಬಳಲುತ್ತಿದ್ದರು.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಒಂದು ವಾರದಿಂದ ಹಾಸನದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಇದ್ದಕ್ಕಿದ್ದಂತೆ ನಿನ್ನೆ ಬುಧವಾರ ಸಂಜೆಯಿಂದ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು. ಇದೀಗ ಗುಂಡೆಕಟ್ಟೆ ಅರಣ್ಯ ಪ್ರದೇಶದ ಬಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಂದು ತಿಂಗಳ ಹಿಂದಷ್ಟೇ ಮುಖ್ಯಪೇಡೆಯಾಗಿ ಮುಂಬಡ್ತಿ ಪಡೆದಿದ್ದರು. ಹೊಳೆನರಸೀಪುರ ಠಾಣೆಗೆ ವರ್ಗಾವಣೆಗೊಂಡಿದ್ದರು.
ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.