HomeKarnatakaಆ. 2ರಂದು ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ...

ಆ. 2ರಂದು ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಬಳ್ಳಾರಿ : ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿ ಲಿಖಿತ ಪರೀಕ್ಷೆಯು ಆಗಸ್ಟ್ 2 ರಂದು ನಡೆಯಲಿದ್ದು, ಪರೀಕ್ಷೆಯನ್ನು ಅಕ್ರಮ ಮುಕ್ತವಾಗಿ ಹಾಗೂ ಸುಸೂತ್ರವಾಗಿ ನಡೆಸುವ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಲಭ್ಯವಿರುವ ಅಧಿಕಾರವನ್ನು ಬಳಸಿ ಈ ಆದೇಶವನ್ನು ಹೊರಡಿಸಲಾಗಿದೆ. ಅಂದು ಬೆಳಿಗ್ಗೆ 10.30 ರಿಂದ 12 ಗಂಟೆಯ ವರೆಗೆ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್ – ಮಿಕ್ಕುಳಿದ ವೃಂದ) ಪರೀಕ್ಷೆ ಮತ್ತು ಸಂಜೆ 04 ರಿಂದ 05.30 ಗಂಟೆಯ ವರೆಗೆ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್ – ಸ್ಥಳೀಯ ವೃಂದ) ಪರೀಕ್ಷೆ ನಡೆಯಲಿವೆ.

ಬಳ್ಳಾರಿ ಜಿಲ್ಲೆಯಾದ್ಯಂತ ಒಟ್ಟು 25 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳು ಕಾರ್ಯನಿರ್ವಹಿಸದಂತೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿಗಳು ಮತ್ತು ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಪ್ರತಿಬಂಧಿಸಲಾಗಿದೆ. ಈ ನಿಷೇಧಾಜ್ಞೆ ಆದೇಶವು ಪರೀಕ್ಷಾ ಕರ್ತವ್ಯದಲ್ಲಿ ನಿರತರಾಗಿರುವ ಮೇಲ್ವಿಚಾರಕರು ಹಾಗೂ ಸಂಬAಧಪಟ್ಟ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್

ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಬೃಹತ್ ನೇಮಕಾತಿ ಪರ್ವ ಆರಂಭವಾಗಿದೆ. ಇದರಲ್ಲಿ 3991 ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಆಗಸ್ಟ್ 2ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಈ ಪೈಕಿ ಉಳಿಕೆ ಮೂಲ ವೃಂದದಲ್ಲಿ 3395 ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ 596 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಉಳಿಕೆ ಮೂಲ ವೃಂದದ ಅಭ್ಯರ್ಥಿಗಳಿಗೆ ಬೆಳಿಗ್ಗೆ 10.00 ರಿಂದ 11.30ರವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ. ಇಲ್ಲಿ ಒಟ್ಟು 884 ಪರೀಕ್ಷಾ ಕೇಂದ್ರಗಳಿವೆ. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆಯನ್ನು ಮಧ್ಯಾಹ್ನ 2.30ರ ಬದಲು ಸಂಜೆ 4 ಗಂಟೆಯಿಂದ 5.30ರವರೆಗೆ ನಡೆಸಲು ನಿರ್ಧರಿಸಲಾಗಿದೆ. ಇದಕ್ಕಾಗಿ 186 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಆಗಸ್ಟ್ 2ರಂದು ನಡೆಯಲಿರುವ ಸಿವಿಲ್ ಕಾನ್ಸ್‌ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಅಭ್ಯರ್ಥಿಗಳಿಗೆ ಶುಭವಾಗಲಿ. ನಿಮ್ಮ ಪರಿಶ್ರಮ, ಆತ್ಮವಿಶ್ವಾಸ ಮತ್ತು ಸಿದ್ಧತೆಗೆ ತಕ್ಕ ಯಶಸ್ಸು ದೊರೆಯಲಿ. ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಿ, ಆತ್ಮಸ್ಥೈರ್ಯದಿಂದ ಪರೀಕ್ಷೆ ಎದುರಿಸಿ ಎಂದು ಆಶಿಸುತ್ತೇನೆ. ವಿಶೇಷ ಸೂಚನೆ: ಈ ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕ, ನ್ಯಾಯಸಮ್ಮತ ಮತ್ತು ವಿಶ್ವಾಸಾರ್ಹವಾಗಿ ನಡೆಸಲು ಕಾಂಗ್ರೆಸ್ ಸರ್ಕಾರ ಅಗತ್ಯವಿರುವ ಎಲ್ಲ ಕಠಿಣ ಕ್ರಮಗಳನ್ನು ಕೈಗೊಂಡಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ವಂಚನೆಗೆ ಅವಕಾಶವಿಲ್ಲ. ಪರೀಕ್ಷೆಯಲ್ಲಿ ಅಕ್ರಮ ಎಸಗಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಅಂತಹ ಅಭ್ಯರ್ಥಿಗಳಿಗೆ ಮುಂದೆ ಯಾವುದೇ ಸರ್ಕಾರಿ ನೇಮಕಾತಿಗಳಲ್ಲಿ ಭಾಗವಹಿಸಲು ಅವಕಾಶ ನೀಡದಂತೆ ಶಾಶ್ವತವಾಗಿ ನಿಷೇಧಿಸಲು ಸರ್ಕಾರ ನಿರ್ಧರಿಸಿದೆ. ಪ್ರಾಮಾಣಿಕವಾಗಿ ಸಿದ್ಧತೆ ನಡೆಸಿರುವ ಪ್ರತಿಯೊಬ್ಬ ಅಭ್ಯರ್ಥಿಗೂ ನ್ಯಾಯ ಒದಗಿಸುವುದು ನಮ್ಮ ಬದ್ಧತೆ. ಪರೀಕ್ಷೆ ಬರೆಯುತ್ತಿರುವ ಎಲ್ಲ ಅಭ್ಯರ್ಥಿಗಳಿಗೂ ಶುಭವಾಗಲಿ ಎಂದಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular