ಪೊಲೀಸ್ ಕುಟುಂಬ ಸದಸ್ಯರಿಗೆ ಗುಡ್ ನ್ಯೂಸ್: ವಿಮಾ ಮೊತ್ತ ಹೆಚ್ಚಳ

ಬೆಂಗಳೂರು: ಪೊಲೀಸ್ ಕುಟುಂಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹುತಾತ್ಮ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹುತಾತ್ಮ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತ 20 ಲಕ್ಷ ರೂಪಾಯಿಯಿಂದ 50 ಲಕ್ಷ ರೂಪಾಯಿಗಳಿಗೆ ಹೆಚ್ಚಳ ಮಾಡಲಾಗಿದೆ. ಪೊಲೀಸ್ ಇಲಾಖೆಯ ಫಾಲೋಯರ್ ಹುದ್ದೆಯಿಂದ ಮಹಾನಿರ್ದೇಶಕರು ಮತ್ತು ಆರಕ್ಷಕ ಮಾಹಾ ನಿರೀಕ್ಷಕರು ಹುದ್ದೆಯವರೆಗೆ ವಿಶೇಷ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷದವರೆಗೆ ಹೆಚ್ಚಿಸಲಾಗಿದೆ.

ಪ್ರಸಕ್ತ ಚಾಲ್ತಿಯಲ್ಲಿರುವ ವಿಮಾ ಅವಧಿ ಮುಕ್ತಾಯದಿಂದ ನಂತರದ ದಿನಾಂಕದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಈ ಯೋಜನೆಯನ್ನು ವಿಮಾ ಕಂಪನಿಗೆ ವಹಿಸದೇ ಆಕಸ್ಮಿಕ ಅಪಘಾತದಲ್ಲಿ ಮೃತಪಟ್ಟ ಕರ್ತವ್ಯನಿರತ ಪೊಲೀಸ್ ಇಲಾಖೆಯ ಉದ್ಯೋಗಿಗಳ ಕುಟುಂಬಗಳಿಗೆ ನೀಡುವ ವಿಶೇಷ ಗುಂಪು ವಿಮಾ ಮೊತ್ತವನ್ನು ನೇರವಾಗಿ ಇಲಾಖೆಯ ಸಂಬಂಧಪಟ್ಟ ಲೆಕ್ಕ ಶೀರ್ಷಿಕೆಯಡಿ ಪಾವತಿ ಮಾಡಲು ಸೂಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read