HomeKarnatakaBREAKING: ಹುಡುಗಿ ಚುಡಾಯಿಸಬೇಡ ಎಂದ ಮಹಿಳೆಗೆ ಚಾಕು ಇರಿತ: ಆರೋಪಿ ಮೇಲೆ ಫೈರಿಂಗ್

BREAKING: ಹುಡುಗಿ ಚುಡಾಯಿಸಬೇಡ ಎಂದ ಮಹಿಳೆಗೆ ಚಾಕು ಇರಿತ: ಆರೋಪಿ ಮೇಲೆ ಫೈರಿಂಗ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಹಿಳೆಗೆ ಚಾಕು ಇರಿದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ವಿಚಾರಣೆಯ ವೇಳೆ ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲೆತ್ನಿಸಿದ ಆರೋಪಿ ಮಹೇಶ ಎಂಬುವನ ಮೇಲೆ ಫೈರಿಂಗ್ ಮಾಡಲಾಗಿದೆ.

ಮಹೇಶನ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನೀಲಾ ಹಂಪಣ್ಣವರ ಎಂಬ ಮಹಿಳೆಗೆ ಮಹೇಶ ಚಾಕುವಿನಿಂದ ಇರಿದಿದ್ದ.

ಲೋಹಿಯಾ ನಗರದಲ್ಲಿ ಹುಡುಗಿಯನ್ನು ಚುಡಾಯಿಸಿದ ವಿಚಾರಕ್ಕೆ ಬುದ್ಧಿವಾದ ಹೇಳಿದ ಹಿನ್ನೆಲೆಯಲ್ಲಿ ನೀಲಾ ಅವರ ಮೇಲೆ ದಾಳಿ ನಡೆಸಿ ಚಾಕುವಿನಿಂದ ಇರಿದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ಪತ್ರೆಗೆ ತೆರಳಿ ಮಾಹಿತಿ ಪಡೆದುಕೊಂಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿ ಮಹೇಶನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುವಾಗ ಹಲ್ಲೆ ಮಾಡಿ ಪರಾರಿಯಾಗಲು ಮುಂದಾಗಿದ್ದು, ಆತನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular