HomeKarnatakaBIG NEWS: ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಇಬ್ಬರು ಕೊಲೆ ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

BIG NEWS: ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಇಬ್ಬರು ಕೊಲೆ ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

ಹುಬ್ಬಳ್ಳಿ: ಯುವಕನನ್ನು ಹತ್ಯೆಗೈದಿದ್ದ ಇಬ್ಬರು ಕೊಲೆ ಆರೋಪಿಗಳ ಮೇಲೆ ಹುಬ್ಬಳ್ಳಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಆರೋಪಿಗಳಾದ ಸುದೀಪ್ ಹಾಗೂ ಕಿರಣ್ ಮೇಲೆ ಪೊಲೀಸರು ಫೈರಂಗ್ ಮಾಡಿದ್ದಾರೆ. ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನ ನಡೆಸಿದ್ದ ಹಿನ್ನೆಲೆಯಲ್ಲಿ ಫೈರಿಂಗ್ ಮಾಡಲಾಗಿದೆ.

ಇಬ್ಬರು ಆರೋಪಿಗಳು ಶಿವು ಚಂದ್ರಶೇಖರ್ ಎಂಬ ಯುವಕನನ್ನು ಗೋನಕೊಪ್ಪದ ಬಳಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು. ಹತ್ಯೆಯಾದ ಕೆಲ ಗಂಟೆಗಳಲ್ಲೇ ಅಶೋಕ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಉಳಿದ ಆರೋಪಿಗಳನ್ನು ತೋರಿಸುವುದಾಗಿ ಹೇಳಿ ಪೊಲೀಸರನ್ನು ಕರೆದೊಯ್ದಿದ್ದಾರೆ. ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಇಬ್ಬರ ಕಾಲಿಗೂ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಾಳು ಆರೋಪಿಗಳನ್ನು ಕಿಮ್ಸ್ ಆಸ್ಪತ್ರೆ ದಾಖಲಿಸಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular