HomeKarnatakaಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ; ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ; ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಗದಗ: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ರೌಡಿ ಶೀಟರ್ ಸಂಜಯ್ ಕೊಪ್ಪದ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಸ್ಥಳ ಮಹಜರು ವೇಳೆ ಆರೋಪಿ ಸಂಜಯ್ ಕೊಪ್ಪದ್ ಪೊಲೀಸರ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದ.

ಸಂಜಯ್ ಕೊಪ್ಪದ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಆರೋಪಿಯನ್ನು ಗದಗ ಜಿಲ್ಲೆಯ ಲಕ್ಕುಂಡಿ ಕಣಗಿನಹಾಳ ರಸ್ತೆಯಲ್ಲಿ ಸ್ಥಳ ಮಹಜರಿಗೆ ಕರೆತಂದಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಘಟನೆಯಲ್ಲಿ ಕಾನ್ಸ್ ಟೇಬಲ್ ಪ್ರಕಾಶ್ ಗಾಣಿಗೇರ ಕೈ ಹಾಗೂ ಕಾಲಿಗೆ ಗಾಯಗಳಾಗಿವೆ. ಆತ್ಮರಕ್ಷಣೆಗಾಗಿ ಈ ವೇಳೆ ಸಿಪಿಐ ಸಂಗಮೇಶ್ ಶಿವಯೋಗಿ ಸಂಜಯ್ ಮೇಲೆ ಫೈರಿಂಗ್ ಮಾಡಿ ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೌಡಿಶೀಟರ್ ಸಂಜಯ್ ಕೊಪ್ಪದ ವಿರುದ್ಧ 12 ಪ್ರಕರನಗಳು ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

 

For Latest News Updates, Join Our Whatsapp Community🚩
RELATED ARTICLES

Most Popular