HomeKarnatakaಗುಂಡು ಹಾರಿಸಿಕೊಂಡು ಪೊಲೀಸ್ ಕಾನ್ಸ್ ಟೆಬಲ್ ಆತ್ಮಹತ್ಯೆ

ಗುಂಡು ಹಾರಿಸಿಕೊಂಡು ಪೊಲೀಸ್ ಕಾನ್ಸ್ ಟೆಬಲ್ ಆತ್ಮಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರದ ತಹಸಿಲ್ ಕಚೇರಿ ಕಟ್ಟಡದ ಮೇಲೆ ಪೊಲೀಸ್ ಕಾನ್ ಸ್ಟೆಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಲ್ಲಿಕಾರ್ಜುನ ಪತ್ತೆಪೂರ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಆಗಿದ್ದಾರೆ. ಗುರುವಾರ ಬೆಳಗಿನ ಜಾವ 303 ರೈಫಲ್ ನಿಂದ ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಸ ಗುಡಿಸುವವರು ಕಟ್ಟಡದ ಮೇಲೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಲ್ಲಿಕಾರ್ಜುನ ಗಂಟಲಿನ ಮೂಲಕ ನುಗ್ಗಿದ ಗುಂಡು ನೆತ್ತಿಯ ಮೂಲಕ ಹೊರ ಬಂದಿದೆ. ಕೈಯಲ್ಲಿ ಬಂದೂಕು ಹಿಡಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ. ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಮಲ್ಲಿಕಾರ್ಜುನ ಬೆಳಗಿನ ಜಾವ ಮೂರು ಗಂಟೆಗೆ ತಹಶೀಲ್ ಕಚೇರಿಗೆ ಬಂದಿದ್ದು, ಜೊತೆಗಿದ್ದವರಿಗೆ ಸ್ವಲ್ಪ ಮೇಲೆ ಹೋಗಿ ಬರುತ್ತೇನೆ ಎಂದು ಕಟ್ಟಡದ ಮೇಲೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular