HomeKarnatakaBIG NEWS: ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆಸೃಷ್ಟಿಸಿ ವಂಚನೆಗೆ ಯತ್ನ: ಆರೋಪಿ...

BIG NEWS: ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆಸೃಷ್ಟಿಸಿ ವಂಚನೆಗೆ ಯತ್ನ: ಆರೋಪಿ ಅರೆಸ್ಟ್

ಬೆಳಗಾವಿ: ಐಪಿಎಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ವಂಚನೆಗೆ ಯತ್ನಿಸುತ್ತಿದ್ದ ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನ ಮೂಲದ ಅರ್ಬಾಜ್ ಖಾನ್ ಬಂಧಿತ ಆರೋಪಿ. ಅರ್ಬಾಜ್ ಖಾನ್ ಬೆಳಗಾವಿ ಎಸ್ ಪಿ ಭೀಮಾಶಂಕರ್ ಗುಳೇದ್, ಗದಗ ಜಿಲ್ಲಾ ಎಸ್ ಪಿ ನೇಮಗೌಡ, ಮಂಡ್ಯ ಜಿಲ್ಲಾ ಎಸ್ ಪಿ ಮಲ್ಲಿಕಾರ್ಜುನ ಅವರ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ, ಫ್ರೆಂಡ್ಸ್ ರಿಕ್ವೆಸ್ಟ್ ಕಳುಹಿಸುತ್ತಿದ್ದ.

ಬಳಿಕ ಹುಟ್ಟು ಹಬ್ಬ ಇದೆ ಎಂದು ಪೋಸ್ಟ್ ಹಾಕುತ್ತಿದ್ದ. ಶುಭಾಷಯ ತಿಳಿಸಿದವರನ್ನು ಟಾರ್ಗೆಟ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ. ವಿಷಯ ತಿಳಿಯುತ್ತಿದ್ದಂತೆ ಬೆಳಗಾವಿ ಎಸ್ ಪಿ ಭೀಮಾಶಂಕರ್ ಗುಳೇದ್ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯ ಆರೋಪಿ ಅರ್ಬಾಜ್ ಖಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ಫೇಸ್ ಬುಕ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟರೆ ಅಥವಾ ಸಂಶಯಾಸ್ಪದ ಸಂದೇಶ ಬಂದಲ್ಲಿ ಸಾರ್ವಜನಿಕರು ಜಾಗೃತರಾಗಿ, ಪೊಲೀಸರಿಗೆ ದೂರು ನೀಡಿವಂತೆ ಎಸ್ ಪಿ ಭೀಮಾಶಮ್ಕರ್ ಗುಳೇದ್ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular