ಬೆಂಗಳೂರು: ಅಪರಾಧ ಚಟುವಟಿಕೆಗಳಲ್ಲಿ ಪೊಲೀಸರು ಭಾಗಿಯಾಗುವುದು ಕಂಡು ಬಂದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಅವರನ್ನು ಸೇವೆಯಿಂದ ವಜಾಗೊಳಿಸುವುದು ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಎಚ್ಚರಿಕೆ ವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಕೆಲವು ಸೂಚನೆ ನೀಡಲಾಗಿದೆ. 7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಬೆಂಗಳೂರು ನಗರ ಪೊಲೀಸರು ಏಳು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಕೆಲವರನ್ನು ಬಂಧಿಸಬೇಕಿದೆ ಎಂದರು.
ಪ್ರಕರಣದ ಜವಾಬ್ದಾರಿ ವಹಿಸಿಕೊಂಡ ಪೊಲೀಸ್ ಆಯುಕ್ತರು, ಡಿಸಿಪಿಗಳು ಹಾಗೂ ಇನ್ನೂರಕ್ಕೂ ಹೆಚ್ಚು ಸಿಬ್ಬಂದಿಗೆ ಅಭಿನಂದನೆ ಸಲ್ಲಿಸುತ್ತೇನೆ. ದರೋಡೆ ಪ್ರಕರಣ ಪೋಲಿಸ್ ಇಲಾಖೆಗೆ ಸವಾಲಾಗಿತ್ತು. ತಾಂತ್ರಿಕವಾಗಿ ಬಹಳ ಎಚ್ಚರಿಕೆಯಿಂದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲಸ ಮಾಡಿ ಪ್ರಕರಣವನ್ನು ಭೇದಿಸಿದ್ದಾರೆ. ಇಲಾಖೆಯಲ್ಲಿ ಇನ್ನೂ ಮುಂದೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಈ ರೀತಿಯ ಕೃತ್ಯದಲ್ಲಿ ಯಾರಾದರೂ ಭಾಗಿಯಾಗುವುದು ಕಂಡು ಬಂದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಸೇವೆಯಿಂದ ವಜಾಗೊಳಿಸಲಾಗುವುದು ಎಂದು ಹೇಳಿದ್ದಾರೆ.
