HomeLatest Newsಇನ್ನು ಕಾಲ್ನಡಿಗೆಯಲ್ಲಿ ಪೊಲೀಸ್ ಗಸ್ತು ವ್ಯವಸ್ಥೆ ಜಾರಿ

ಇನ್ನು ಕಾಲ್ನಡಿಗೆಯಲ್ಲಿ ಪೊಲೀಸ್ ಗಸ್ತು ವ್ಯವಸ್ಥೆ ಜಾರಿ

ಬೆಂಗಳೂರು: ಅಪರಾಧ ಚಟುವಟಿಕೆ ನಿಯಂತ್ರಿಸುವ ಉದ್ದೇಶದಿಂದ ಮಾಲ್ ಗಳು ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿ ಹೊಸದಾಗಿ ಕಾಲ್ನಡಿಗೆ ಗಸ್ತು ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿ ಬೆಳಗ್ಗೆ ಹಾಗೂ ಸಂಜೆ ಬೀಟ್ ಗಳಲ್ಲಿ ಸಿಬ್ಬಂದಿ ಗಸ್ತು ತಿರುಗಾಟ ನಡೆಸುತ್ತಿದ್ದಾರೆ. ನಗರದಾತ್ಯಂತ ಬೀಟ್ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಲಾಗಿದೆ. ಜನ ಸೇರುವ ಸ್ಥಳಗಳಲ್ಲಿ ಪೋಲೀಸರ ಉಪಸ್ಥಿತಿ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಮಾರುಕಟ್ಟೆ, ಮಾಲ್ ಗಳು, ಪ್ರಾರ್ಥನಾ ಮಂದಿರ, ದೇವಾಲಯಗಳು ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿ ಕಾಲುನಡಿಗೆ ಗಸ್ತು ಜಾರಿಗೊಳಿಸಲಾಗಿದೆ. ಈ ಬೀಟ್ ನಲ್ಲಿ ಸಬ್ ಇನ್ಸ್ಪೆಕ್ಟರ್ ಮಟ್ಟದ ಅಧಿಕಾರಿಗಳು ಗಸ್ತು ತಿರುಗಾಟ ನಡೆಸಲಿದ್ದಾರೆ. ಯಾವುದೇ ಗಲಾಟೆ, ಕಾನೂನು ಬಾಹಿರ ಕೃತ್ಯ ವರದಿ ಆದರೆ ತಕ್ಷಣ ಸಿಬ್ಬಂದಿ ಸ್ಪಂದಿಸಲಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular