HomeKarnatakaಪ್ರತಿಷ್ಠಿತ ಕಂಪನಿಗಳ ನಕಲಿ ಡಿಟರ್ಜೆಂಟ್ ತಯಾರಿಸಿ ಮಾರಾಟ ಮಾಡುತ್ತಿದ್ದ ಫ್ಯಾಕ್ಟರಿ ಮೇಲೆ ದಾಳಿ

ಪ್ರತಿಷ್ಠಿತ ಕಂಪನಿಗಳ ನಕಲಿ ಡಿಟರ್ಜೆಂಟ್ ತಯಾರಿಸಿ ಮಾರಾಟ ಮಾಡುತ್ತಿದ್ದ ಫ್ಯಾಕ್ಟರಿ ಮೇಲೆ ದಾಳಿ

ಬೆಂಗಳೂರು: ಪ್ರತಿಷ್ಠಿತ ಬ್ರಾಂಡ್ ಗಳ ಹೆಸರಲ್ಲಿ ನಕಲಿ ಡಿಟರ್ಜೆಂಟ್ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಘಟಕದ ಮೇಲೆ ಮಲ್ಲೇಶ್ವರಂ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.

ಹಿಂದೂಸ್ತಾನ್ ಯುನಿಲಿವರ್ ಕಂಪನಿಯ ಪ್ರತಿನಿಧಿ ನೀಡಿದ ದೂರಿನ ಮೇರೆಗೆ ದಾಳಿ ನಡೆಸಿ ಮಾಲೀಕ ಅರ್ಜುನ್ ಜೈನ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಮಲ್ಲೇಶ್ವರಂನ ವಿವಿಧ ಅಂಗಡಿಗಳಿಗೆ ಪ್ರತಿಷ್ಠಿತ ಕಂಪನಿಗಳ ನಕಲಿ ಡಿಟರ್ಜೆಂಟ್ ಉತ್ಪನ್ನಗಳನ್ನು ಪೂರೈಕೆ ಮಾಡುತ್ತಿದ್ದ ವೇಳೆಯಲ್ಲಿ ಆರೋಪಿ ಕಡೆಯವರನ್ನು ವಶಕ್ಕೆ ಪಡೆದು ಉತ್ಪನ್ನಗಳನ್ನು ಜಪ್ತಿ ಮಾಡಲಾಗಿದೆ.

ಬಳಿಕ ಮಾದನಾಯಕನಹಳ್ಳಿ ನಡೆಯುತ್ತಿದ್ದ ಘಟಕದ ಮೇಲೆ ದಾಳಿ ನಡೆಸಿ ಪರಿಶೀಲಿಸಲಾಗಿದೆ. ದಾಳಿಯ ವೇಳೆ 20 ಲಕ್ಷ ರೂಪಾಯಿ ಮೌಲ್ಯದ ಡಿಟರ್ಜೆಂಟ್ ವಸ್ತುಗಳು, ವಿವಿಧ ಕಂಪನಿಯ ಲೇಬಲ್, ಮಿಕ್ಸಿಂಗ್ ಯಂತ್ರಗಳನ್ನು ಜಪ್ತಿ ಮಾಡಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular